
ನವದೆಹಲಿ, 15 ಮಾರ್ಚ್ (ಹಿ.ಸ.):
ಆ್ಯಂಕರ್:
ಭಾರತದ ಚುನಾವಣಾ ಆಯೋಗ ಇಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಿಗದಿಯಾಗಿದೆ . ಈ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ.
ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೀಘ್ರದಲ್ಲೇ ವಿಧಾನಸಭೆ ಚುನಾವಣೆ ನಡೆಯಬೇಕಿದೆ. ಈ ಹಿನ್ನೆಲೆ ಚುನಾವಣಾ ಆಯೋಗವು ದಿನಾಂಕಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ.
ರಾಜ್ಯಗಳ ವಿಧಾನಸಭೆಗಳ ಅವಧಿ ಕ್ರಮವಾಗಿ ಮುಕ್ತಾಯವಾಗಲಿರುವ ದಿನಾಂಕಗಳು ಕೂಡ ಸಮೀಪಿಸುತ್ತಿವೆ. ಪಶ್ಚಿಮ ಬಂಗಾಳ ವಿಧಾನಸಭೆಯ ಅವಧಿ ಮೇ 7ರಂದು, ತಮಿಳುನಾಡು ಮೇ 10ರಂದು, ಅಸ್ಸಾಂ ಮೇ 20ರಂದು, ಕೇರಳ ಮೇ 23ರಂದು ಮತ್ತು ಪಾಂಡಿಚೇರಿ ಜೂನ್ 15ರಂದು ಮುಕ್ತಾಯವಾಗಲಿದೆ.
ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಬಳಿಕ ಈ ರಾಜ್ಯಗಳಲ್ಲಿ ಮೊದಲ ಬಾರಿಗೆ ಚುನಾವಣೆ ನಡೆಯಲಿದೆ. ಪಂಚರಾಜ್ಯಗಳ ಚುನಾವಣಾ ವೇಳಾಪಟ್ಟಿ ಪ್ರಕಟವಾದ ಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದ್ದು, ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ನಿರೀಕ್ಷೆ ಇದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa