ಜಿಬಿಎ ಚುನಾವಣೆ ಗೆಲ್ಲುವುದೇ ನಮ್ಮ ಗುರಿ: ಡಿ.ಕೆ. ಶಿವಕುಮಾರ್
ಬೆಂಗಳೂರು, 15 ಮಾರ್ಚ್ (ಹಿ.ಸ.): ಆ್ಯಂಕರ್: ಮುಂಬರುವ ಜಿಬಿಎ (ಬೆಂಗಳೂರು ನಗರ ಪಾಲಿಕೆ) ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಸಾಧಿಸುವುದೇ ಪಕ್ಷದ ಪ್ರಮುಖ ಗುರಿಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರು ನಗರದ ಭಾರತ ಜೋಡೊ‌ ಭವನದಲ್ಲಿ ನಡೆದ ಬೆಂಗಳೂರು ನಗರ ಪಾಲಿಕೆ ಚುನಾವ
Dks


ಬೆಂಗಳೂರು, 15 ಮಾರ್ಚ್ (ಹಿ.ಸ.):

ಆ್ಯಂಕರ್:

ಮುಂಬರುವ ಜಿಬಿಎ (ಬೆಂಗಳೂರು ನಗರ ಪಾಲಿಕೆ) ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಸಾಧಿಸುವುದೇ ಪಕ್ಷದ ಪ್ರಮುಖ ಗುರಿಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರು ನಗರದ ಭಾರತ ಜೋಡೊ‌ ಭವನದಲ್ಲಿ ನಡೆದ ಬೆಂಗಳೂರು ನಗರ ಪಾಲಿಕೆ ಚುನಾವಣೆಗೆ ಅರ್ಜಿ ಸಲ್ಲಿಸಿರುವ ಚುನಾವಣಾ ಆಕಾಂಕ್ಷಿಗಳು ಹಾಗೂ ಪದಾಧಿಕಾರಿಗಳೊಂದಿಗಿನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದರೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಪಡೆಯಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿರಲಿದೆ. ಕಾರ್ಯಕರ್ತರ ಶ್ರಮ ಹಾಗೂ ಸಂಘಟಿತ ಪ್ರಯತ್ನದ ಮೂಲಕ ಜನರ ವಿಶ್ವಾಸ ಗೆದ್ದು ನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಬೇಕು ಎಂದು ಅವರು ಕರೆ ನೀಡಿದರು.

ಸಭೆಯಲ್ಲಿ ಪಾಲಿಕೆ ಚುನಾವಣೆಗೆ ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande