
ವಿಜಯಪುರ, 15 ಮಾರ್ಚ್ (ಹಿ.ಸ.)
ಆ್ಯಂಕರ್ : ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ವತಿಯಿಂದ ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಲಾಯಿತು.
ಜಿಲ್ಲಾ ವಿಕಲಚೇತನರ ಕಚೇರಿಯಲ್ಲಿ ಅವ್ಯವಸ್ಥೆ ಹಾಗೂ ಗೋಲ್ಮಾಲ್ ನಡೆಯುತ್ತಿದೆ ಎಂದು ಒಕ್ಕೂಟದ ಪದಾಧಿಕಾರಿಗಳು ಆರೋಪಿಸಿದರು. ಅಂಗವಿಕಲರ ಸಮಸ್ಯೆಗಳ ಕುರಿತು ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಒಕ್ಕೂಟದ ಅಧ್ಯಕ್ಷರಾದ ವಿನೋದ ಖೇಡ ಮಾತನಾಡಿ, ಅಂಗವಿಕಲರ ಕಲ್ಯಾಣಕ್ಕೆ ಸಂಬಂಧಿಸಿದ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು ಕಚೇರಿಯಿಂದ ಸರಿಯಾದ ಮಾಹಿತಿ ಹಾಗೂ ನೆರವು ದೊರೆಯುತ್ತಿಲ್ಲ ಎಂದು ಹೇಳಿದರು.
ಅಂಗವಿಕಲರು ಹಲವು ಬಾರಿ ಮನವಿ ಮಾಡಿದರೂ ಸಮಸ್ಯೆಗಳಿಗೆ ತ್ವರಿತ ಪರಿಹಾರ ದೊರೆಯುತ್ತಿಲ್ಲ ಎಂದು ಅವರು ದೂರಿದರು.
ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಅಂಗವಿಕಲರ ಸಮಸ್ಯೆಗಳನ್ನು ಶೀಘ್ರದಲ್ಲಿ ಪರಿಹರಿಸಬೇಕು ಎಂದು ಒಕ್ಕೂಟದ ಸದಸ್ಯರು ಒತ್ತಾಯಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande