
ಚಿತ್ರದುರ್ಗ, 15 ಮಾರ್ಚ್ (ಹಿ.ಸ.):
ಆ್ಯಂಕರ್:
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಮೃತಪಟ್ಟಿರುವುದು ಮನಸ್ಸಿಗೆ ತೀವ್ರ ನೋವನ್ನುಂಟು ಮಾಡಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್ ದಾರಿಮನಿ, ಅಮರೀಶ್ ಬರ್ಗಿ, ಸಚೀನ್ ಮೃತರು. ನಿರಂತರ ಅಭ್ಯಾಸ, ಕಠಿಣ ಪರಿಶ್ರಮದಿಂದ ಕನಸು ಹೊತ್ತು ಪೊಲೀಸ್ ಇಲಾಖೆಗೆ ನೇಮಕವಾಗಿದ್ದರು.
ಈ ದುರ್ಘಟನೆಯಿಂದ ಪೊಲೀಸ್ ಇಲಾಖೆಗೆ ಮತ್ತು ಅವರ ಕುಟುಂಬವರ್ಗದವರಿಗೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ದುಃಖತಪ್ತ ಕುಟುಂಬ ವರ್ಗದವರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ್ದು, ಭಗವಂತನು ಮೃತರ ಆತ್ಮಕ್ಕೆ ಚಿರ ಶಾಂತಿ ಕರುಣಿಸಲಿ. ದುಃಖತಪ್ತ ಕುಟುಂಬದವರಿಗೆ ಈ ನೋವನ್ನು ಅರಗಿಸಿಕೊಳ್ಳುವ ಶಕ್ತಿ ನೀಡಲಿ ಎಂದಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿರುವ ಪಿಎಸ್ಐ ಈಶ್ವರ್ ಮತ್ತು ಆರ್‌ಎಸ್‌ಐ ಮಹಾಂತೇಶ್ ಬೊಮ್ಮನ್ನವರ್ ಅವರಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮ ವಹಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಿ ಆರೋಗ್ಯವನ್ನು ಚೇತರಿಕೊಳ್ಳಲಿ ಎಂದು ಹಾರೈಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa