
ಬೆಂಗಳೂರು, 15 ಮಾರ್ಚ್ (ಹಿ.ಸ.):
ಆ್ಯಂಕರ್:
ಮುಂಬರುವ ಜಿಬಿಎ ಪಾಲಿಕೆಗಳ ಚುನಾವಣೆಯನ್ನು ಪಾರದರ್ಶಕವಾಗಿ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಮತ್ತು ಮತದಾರರ ಪಟ್ಟಿಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಉದ್ದೇಶದಿಂದ ಕೆಪಿಸಿಸಿ ವತಿಯಿಂದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬೂತ್ ಲೆವೆಲ್ ಏಜೆಂಟ್‌ಗಳ (ಬಿಎಲ್ಎ) ತರಬೇತಿ ಶಿಬಿರವನ್ನು ಆಯೋಜಿಸಲಾಯಿತು.
ಶಿಬಿರದಲ್ಲಿ ಕೆಪಿಸಿಸಿ ಐಟಿ ವಿಭಾಗದ ಅಧ್ಯಕ್ಷರಾದ ರಘುನಂದನ್ ರಾಮಣ್ಣ ಮಾತನಾಡಿ, ಮತದಾರರ ಪಟ್ಟಿಯ ಪರಿಶೀಲನೆ, ಹೊಸ ಮತದಾರರ ಸೇರ್ಪಡೆ, ತಪ್ಪು ವಿವರಗಳ ತಿದ್ದುಪಡಿ ಸೇರಿದಂತೆ ಚುನಾವಣಾ ಪ್ರಕ್ರಿಯೆಯಲ್ಲಿ ಬಿಎಲ್ಎಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಚುನಾವಣೆಗಳು ಪಾರದರ್ಶಕವಾಗಿ ನಡೆಯಲು ಪ್ರತಿಯೊಬ್ಬ ಬಿಎಲ್ಎ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ವಾಜೀದ್, ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಬಿಎಲ್ಎ-2 ಕಾರ್ಯಕರ್ತರು ಭಾಗವಹಿಸಿ ಮತದಾರರ ಪಟ್ಟಿಯ ನಿರ್ವಹಣೆ ಮತ್ತು ಚುನಾವಣಾ ನಿಯಮಾವಳಿಗಳ ಕುರಿತು ಮಾಹಿತಿ ಪಡೆದುಕೊಂಡರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa