ಮಾಚಕನೂರಲ್ಲಿ ಹೊಳಬಸವೇಶ್ವರ ದರ್ಶನ; ಕಾರ್ಯಕರ್ತರ ಸಭೆ
ಬಾಗಲಕೋಟೆ, 15 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮಾಚಕನೂರ ಗ್ರಾಮದ ಹೊಳೆ ಬಸವೇಶ್ವರ ದೇವಾಲಯಕ್ಕೆ ಸಂಸದ ಗೋವಿಂದನಕಾರಜೋಳ್ ಭೇಟಿ ನೀಡಿ ದರ್ಶನ ಪಡೆದರು. ನಾಡಿನ ಸಮಸ್ತ ಜನರ ಸುಖ-ಶಾಂತಿಗಾಗಿ ಪ್ರಾರ್ಥಿಸಿದ ಅವರು ಗ್ರಾಮದ ಪಕ್ಷದ ಮುಖಂಡರ ನಿವಾಸದಲ್ಲಿ ಕಾರ್ಯಕರ್ತರ ಸಭ
ಕಾರಜೋಳ


ಬಾಗಲಕೋಟೆ, 15 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮಾಚಕನೂರ ಗ್ರಾಮದ ಹೊಳೆ ಬಸವೇಶ್ವರ ದೇವಾಲಯಕ್ಕೆ ಸಂಸದ ಗೋವಿಂದನಕಾರಜೋಳ್ ಭೇಟಿ ನೀಡಿ ದರ್ಶನ ಪಡೆದರು.

ನಾಡಿನ ಸಮಸ್ತ ಜನರ ಸುಖ-ಶಾಂತಿಗಾಗಿ ಪ್ರಾರ್ಥಿಸಿದ ಅವರು ಗ್ರಾಮದ ಪಕ್ಷದ ಮುಖಂಡರ ನಿವಾಸದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಘಟನೆ ಬಲಪಡಿಸುವ ಕುರಿತು ಚರ್ಚಿಸಲಾಯಿತು.

ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸವಿಸ್ತಾರವಾಗಿ ಸಮಾಲೋಚನೆ ನಡೆಸಿ ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಿಸಲು ತೀರ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪಕ್ಷದ ತಾಲ್ಲೂಕು ಅಧ್ಯಕ್ಷರು, ಹಿರಿಯ ಮುಖಂಡರು, ಗ್ರಾಮದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande