ಚಿತ್ರದುರ್ಗ ಬಳಿ ಭೀಕರ ರಸ್ತೆ ಅಪಘಾತ: ಮೂವರು ಪೊಲೀಸ್ ಸಿಬ್ಬಂದಿ ದುರ್ಮರಣ
ಚಿತ್ರದುರ್ಗ, 15 ಮಾರ್ಚ್ (ಹಿ.ಸ.): ಆ್ಯಂಕರ್: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ಭಾನುವಾರ ಬೆಳ್ಳಿಗ್ಗೆ ನಡೆದಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
Accident


ಚಿತ್ರದುರ್ಗ, 15 ಮಾರ್ಚ್ (ಹಿ.ಸ.):

ಆ್ಯಂಕರ್:

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ಭಾನುವಾರ ಬೆಳ್ಳಿಗ್ಗೆ ನಡೆದಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಬೆಂಗಳೂರಿನಿಂದ ಬಳ್ಳಾರಿಗೆ ಸ್ನೇಹಿತನ ಮದುವೆಗೆ ತೆರಳುತ್ತಿದ್ದ ಕಾರು ಹೆಗ್ಗೆರೆ ಗ್ರಾಮದ ಸಮೀಪ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಲ್ಲಿ ಮೂವರು ಪೊಲೀಸರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರನ್ನು ಬೆಂಗಳೂರು ಮೂಲದ ಪೊಲೀಸ್ ಸಿಬ್ಬಂದಿಗಳಾದ ಆರ್ ಎಸ್ಐ ಮಂಜುನಾಥ್ (32), ಆರ್ ಎಸ್ಐ ಅಮರೇಶ್ ಹಾಗೂ ಆರ್ ಎಸ್ಐ ಸಚಿನ್ ಎಂದು ಗುರುತಿಸಲಾಗಿದೆ. ಮೂವರೂ ರಿಸರ್ವ್ ಪೊಲೀಸ್ ಅಧಿಕಾರಿಗಳಾಗಿದ್ದರು.

ಇದೇ ವೇಳೆ ಅಪಘಾತದಲ್ಲಿ ಆರ್ ಎಸ್ಐ ಮಹಂತೇಶ್ ಮತ್ತು ಪಿಎಸ್ಐ ಈಶ್ವರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಕುರಿತು ಚಳ್ಳಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande