ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಹಾಸನ, 15 ಮಾರ್ಚ್ (ಹಿ.ಸ.): ಆ್ಯಂಕರ್: ತೋಟಗಾರಿಕೆ ತರಬೇತಿ ಕೇಂದ್ರ, ಸೋಮನಹಳ್ಳಿ ಕಾವಲು ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಗೆ ಹಾಸನ ಜಿಲ್ಲೆಯ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ತಂದೆ ತಾಯಿ ಅಥವಾ ಪೋಷಕರು ಕಡ್
ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ


ಹಾಸನ, 15 ಮಾರ್ಚ್ (ಹಿ.ಸ.):

ಆ್ಯಂಕರ್:

ತೋಟಗಾರಿಕೆ ತರಬೇತಿ ಕೇಂದ್ರ, ಸೋಮನಹಳ್ಳಿ ಕಾವಲು ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಗೆ ಹಾಸನ ಜಿಲ್ಲೆಯ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ತಂದೆ ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ 18 ರಿಂದ 33 ವರ್ಷದೊಳಗಿರಬೇಕು. ಮಾಜಿ ಸೈನಿಕರಿಗೆ 33 ರಿಂದ ಗರಿಷ್ಠ 65 ವರ್ಷ ಹಾಗೂ ಇತರೆ ಅಭ್ಯರ್ಥಿಗಳು 18 ರಿಂದ 30 ವರ್ಷದೊಳಗಿರಬೇಕು.

ಅರ್ಜಿ ನಮೂನೆಯನ್ನು ಇಲಾಖಾ ವೆಬ್ ಸೈಟ್ https://horticulturedir.karnataka.gov.in ನಲ್ಲಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಹಾಸನ ಕಛೇರಿಯಲ್ಲಿ ಪಡೆಯಬಹುದು.

ಅರ್ಜಿ ಶುಲ್ಕದ ಬಾಬ್ತು ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 30 ಮತ್ತು ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 15ಗಳ ಮೊತ್ತಕ್ಕೆ ಇಂಡಿಯನ್ ಪೋಸ್ಟಲ್ ಆರ್ಡರ್ ಡಿಮ್ಯಾಂಡ್ ಡ್ರಾಫ್ಟ್ ಮುಖೇನ ತೋಟಗಾರಿಕೆ ಜಂಟಿ ನಿರ್ದೇಶಕರು, (ಜಿ.ಪಂ.), ಹಾಸನ ರವರ ಹೆಸರಿನಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಏ.15 ಸಂಜೆ 5.30 ಗಂಟೆಯೊಳಗೆ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ, ರಾಜ್ಯವಲಯ, ಹಾಸನ ರವರ ಕಛೇರಿ ಅಥವಾ ದೂರವಾಣಿ ಸಂಖ್ಯೆ 990103372 / 9481350318 ಅನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande