ಸ್ವಚ್ಛ ಸರ್ವೇಕ್ಷಣ್ ಜಾಥಾಗೆ ಸಚಿವ ಚಲುವರಾಯಸ್ವಾಮಿ ಚಾಲನೆ
ಮಂಡ್ಯ, 15 ಮಾರ್ಚ್ (ಹಿ.ಸ.): ಆ್ಯಂಕರ್: ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಸ್ವಚ್ಛತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪುರಸಭೆ ಕಾರ್ಯಾಲಯದ ನೇತೃತ್ವದಲ್ಲಿ ಭಾನುವಾರ ಸ್ವಚ್ಛ ಸರ್ವೇಕ್ಷಣ್ ಅಂಗವಾಗಿ ಸ್ವಚ್ಛತಾ ಜಾಥಾ ಹಮ್ಮಿಕೊಳ್ಳಲಾಯಿತು. ಪಟ್ಟಣದ ಶ್ರೀ ಸೌಮ್ಯಕೇಶವ ದೇವಸ್ಥಾನದ
Jatha


ಮಂಡ್ಯ, 15 ಮಾರ್ಚ್ (ಹಿ.ಸ.):

ಆ್ಯಂಕರ್:

ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಸ್ವಚ್ಛತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪುರಸಭೆ ಕಾರ್ಯಾಲಯದ ನೇತೃತ್ವದಲ್ಲಿ ಭಾನುವಾರ ಸ್ವಚ್ಛ ಸರ್ವೇಕ್ಷಣ್ ಅಂಗವಾಗಿ ಸ್ವಚ್ಛತಾ ಜಾಥಾ ಹಮ್ಮಿಕೊಳ್ಳಲಾಯಿತು.

ಪಟ್ಟಣದ ಶ್ರೀ ಸೌಮ್ಯಕೇಶವ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಜಾಥಾಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ನಗರಗಳನ್ನು ಸ್ವಚ್ಛವಾಗಿಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಸರ್ಕಾರದ ಯೋಜನೆಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಹೇಳಿದರು.

ಸ್ವಚ್ಛತೆ ಕಾಪಾಡುವುದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಅತ್ಯಂತ ಮುಖ್ಯವಾಗಿದ್ದು, ಎಲ್ಲರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಶುದ್ಧವಾಗಿಟ್ಟುಕೊಳ್ಳುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಚಿವರು ಕರೆ ನೀಡಿದರು.

ಈ ಜಾಥಾದಲ್ಲಿ ಪುರಸಭೆ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ ಸ್ವಚ್ಛತಾ ಸಂದೇಶವನ್ನು ಹರಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande