50 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ
ವಿಜಯಪುರ, 16 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಬಲಾದ್ ಗ್ರಾಮದ ಅಲೆಮಾರಿ ಚನ್ನದಾಸರ ಕಾಲೋನಿಯಲ್ಲಿ 2025–26ನೇ ಸಾಲಿನ SCP/TSP ಯೋಜನೆಯಡಿ ಸುಮಾರು 50 ಲಕ್ಷ ರೂಪಾಯಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುವ ಸಿ.ಸಿ ರಸ್ತೆ ಕಾಮಗಾರಿಗೆ ಶಾಸಕ ಯಶವಂತರಾಯಗೌಡ ಅವರು ಸ್ಥಳೀಯ ಮ
ಇಂಡಿ ಸಿಸಿ ರಸ್ತೆ


ವಿಜಯಪುರ, 16 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಬಲಾದ್ ಗ್ರಾಮದ ಅಲೆಮಾರಿ ಚನ್ನದಾಸರ ಕಾಲೋನಿಯಲ್ಲಿ 2025–26ನೇ ಸಾಲಿನ SCP/TSP ಯೋಜನೆಯಡಿ ಸುಮಾರು 50 ಲಕ್ಷ ರೂಪಾಯಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುವ ಸಿ.ಸಿ ರಸ್ತೆ ಕಾಮಗಾರಿಗೆ ಶಾಸಕ ಯಶವಂತರಾಯಗೌಡ ಅವರು ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರಿಂದ ಭೂಮಿ ಪೂಜೆ ಮಾಡಿಸಿದರು.

ಈ ಯೋಜನೆಯ ಮೂಲಕ ಕಾಲೋನಿಯ ನಿವಾಸಿಗಳಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.

ಈ ಕುರಿತು ಮಾತನಾಡಿದ ಶಾಸಕರು, ನನ್ನ ಅನುಪಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮಸ್ಥರಿಂದ ಭೂಮಿ ಪೂಜೆ ಮಾಡಿಸುವ ಮೂಲಕ ಅವರ ಜವಾಬ್ದಾರಿಯನ್ನು ಹೆಚ್ಚಿಸುವಂತೆ ಮಾಡಿದ್ದೆನೆ ಎಂದು ಪ್ರಕಟಣೆ ಮೂಲಕ ಅವರು ತಿಳಿಸಿದರು.

ಇಂಡಿ ಮತಕ್ಷೇತ್ರದಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಎಲ್ಲೆಡೆ ರಸ್ತೆ ಸಂಪರ್ಕ ಕಲ್ಪಿಸುವ ಕಾರ್ಯ ನಡೆಯುತ್ತಿದೆ. ಹಳ್ಳಿಗಳ ಅಭಿವೃದ್ಧಿಯೇ ರಾಜ್ಯದ ಅಭಿವೃದ್ಧಿ ಎಂಬ ಸಂಕಲ್ಪದೊಂದಿಗೆ ಪ್ರತಿಯೊಂದು ಗ್ರಾಮಕ್ಕೂ ಉತ್ತಮ ರಸ್ತೆ ಸಂಪರ್ಕ ಒದಗಿಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

ಸುಸಜ್ಜಿತ ರಸ್ತೆಗಳು ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿಗೆ ಹೊಸ ವೇಗ ನೀಡಲಿದ್ದು, ಜನಜೀವನ ಸುಧಾರಣೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗ್ರಾಮದ ಹಿರಿಯರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande