ಕಲ್ಲು, ಚಪ್ಪಲಿ ಎಸೆಯೋದರಿಂದ ಶಿವಾಜಿ ಮಹಾರಾಜರ ಹಿರಿಮೆ ಕಡಿಮೆಯಾಗುವುದಿಲ್ಲ: ಡಾ. ವೀರಣ್ಣ ಚರಂತಿಮಠ
ಬಾಗಲಕೋಟೆ, 16 ಮಾರ್ಚ್ (ಹಿ.ಸ.) ಆ್ಯಂಕರ್ : ಕಲ್ಲು ಅಥವಾ ಚಪ್ಪಲಿ ಎಸೆಯುವುದರಿಂದ ಛತ್ರಪತಿ ಶಿವಾಜಿ ಮಹಾರಾಜರ ಮಹತ್ವ ಮತ್ತು ಹಿರಿಮೆ ಯಾವುದೇ ರೀತಿಯಲ್ಲಿ ಕಡಿಮೆಯಾಗುವುದಿಲ್ಲ ಎಂದು ಬಾಗಲಕೋಟೆಯಲ್ಲಿ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,
ವೀರಣ್ಣ


ಬಾಗಲಕೋಟೆ, 16 ಮಾರ್ಚ್ (ಹಿ.ಸ.)

ಆ್ಯಂಕರ್ : ಕಲ್ಲು ಅಥವಾ ಚಪ್ಪಲಿ ಎಸೆಯುವುದರಿಂದ ಛತ್ರಪತಿ ಶಿವಾಜಿ ಮಹಾರಾಜರ ಮಹತ್ವ ಮತ್ತು ಹಿರಿಮೆ ಯಾವುದೇ ರೀತಿಯಲ್ಲಿ ಕಡಿಮೆಯಾಗುವುದಿಲ್ಲ ಎಂದು ಬಾಗಲಕೋಟೆಯಲ್ಲಿ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿವಾಜಿ ಮಹಾರಾಜರು ದೇಶದ ಗೌರವ ಹಾಗೂ ಸ್ವಾಭಿಮಾನಕ್ಕೆ ಸಂಕೇತವಾಗಿದ್ದು, ಅವರ ಬಗ್ಗೆ ಅವಮಾನಕಾರಿ ನಡೆ ತೋರಿಸುವುದು ಸರಿಯಲ್ಲ ಎಂದು ಹೇಳಿದರು.

ಕೆಲವರು ರಾಜಕೀಯ ಲಾಭಕ್ಕಾಗಿ ಇಂತಹ ಘಟನೆಗಳನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿದರು. ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡಿದ ಅವರು, ಸಮಾಜದಲ್ಲಿ ಸೌಹಾರ್ದತೆ ಕಾಪಾಡಬೇಕು. ದೇಶಕ್ಕೆ ಗೌರವ ತಂದ ವಿಜ್ಞಾನಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರಂತಹ ವ್ಯಕ್ತಿತ್ವವನ್ನು ಆದರ್ಶವಾಗಿ ತೆಗೆದುಕೊಳ್ಳಬೇಕು, ಉಗ್ರವಾದಿ ಒಸಾಮಾ ಬಿನ್ ಲಾಡೆನ್ ಅವರಂತಹವರ ಅನುಯಾಯಿಗಳಾಗಬಾರದು ಎಂದು ಹೇಳಿದರು.

ಸಮಾಜದಲ್ಲಿ ಶಾಂತಿ ಮತ್ತು ಸಹಬಾಳ್ವೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande