ಉಪಚುನಾವಣೆ ಘೋಷಣೆ ಹಿನ್ನೆಲೆ: ಬಾಗಲಕೋಟೆಯಲ್ಲಿ ಬ್ಯಾನರ್, ಕಟೌಟ್ ತೆರವು ಕಾರ್ಯಾಚರಣೆ
ಬಾಗಲಕೋಟೆ, 16 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಜಾರಿಗೆ ಬಂದ ನೀತಿ ಸಂಹಿತೆ ಪಾಲನೆಗಾಗಿ ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಬ್ಯಾನರ್ ಹಾಗೂ ಕಟೌಟ್ ತೆರವು ಕಾರ್ಯಾಚರಣೆ ಕೈಗೊಳ್ಳಲಾಯಿತು. ನಗರಸಭೆ ಹಾಗೂ ಸಂಬಂಧಪಟ್ಟ ಅಧಿಕಾರ
Banner


ಬಾಗಲಕೋಟೆ, 16 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಜಾರಿಗೆ ಬಂದ ನೀತಿ ಸಂಹಿತೆ ಪಾಲನೆಗಾಗಿ ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಬ್ಯಾನರ್ ಹಾಗೂ ಕಟೌಟ್ ತೆರವು ಕಾರ್ಯಾಚರಣೆ ಕೈಗೊಳ್ಳಲಾಯಿತು.

ನಗರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಅಳವಡಿಸಲಾಗಿದ್ದ ರಾಜಕೀಯ ಪಕ್ಷಗಳ ಬ್ಯಾನರ್, ಪೋಸ್ಟರ್ ಮತ್ತು ಕಟೌಟ್ಗಳನ್ನು ತೆರವುಗೊಳಿಸಲಾಯಿತು.

ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಹಾಕಲಾಗಿದ್ದ ಪ್ರಚಾರ ಸಾಮಗ್ರಿಗಳನ್ನು ಕೂಡ ಸಿಬ್ಬಂದಿ ತೆಗೆದುಹಾಕಿದರು.

ಉಪಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ.

ಮುಂದೆಯೂ ನಗರದಲ್ಲಿ ಅನಧಿಕೃತ ಬ್ಯಾನರ್ ಹಾಗೂ ಪ್ರಚಾರ ಸಾಮಗ್ರಿ ಅಳವಡಿಸದಂತೆ ಸೂಚನೆ ನೀಡಲಾಗಿದೆ.

ಈ ಕಾರ್ಯಾಚರಣೆಯಲ್ಲಿ ನಗರಸಭೆ ಸಿಬ್ಬಂದಿ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande