
ನವದೆಹಲಿ, 16 ಮಾರ್ಚ್ (ಹಿ.ಸ.):
ಆ್ಯಂಕರ್:
ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಭೀಕರ ಅಗ್ನಿ ಅವಘಡಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಮಂತ್ರಿ ಕಚೇರಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, “ಒಡಿಶಾದ ಕಟಕ್‌ನ ಆಸ್ಪತ್ರೆಯಲ್ಲಿ ನಡೆದ ಈ ದುರ್ಘಟನೆ ತೀವ್ರ ನೋವುಂಟು ಮಾಡಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಹೃದಯಪೂರ್ವಕ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ,” ಎಂದು ತಿಳಿಸಿದ್ದಾರೆ.
ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ ಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ. ನೆರವು ನೀಡಲಾಗುವುದಾಗಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa