ಸಿಲಿಂಡರ್ ಎಮರ್ಜನ್ಸಿ, ಗದಗದಲ್ಲಿ ಸಚಿವ ಜಾರ್ಜ್ ಸ್ಪಷ್ಟನೆ
ಗದಗ, 16 ಮಾರ್ಚ್ (ಹಿ.ಸ.) ಆ್ಯಂಕರ್:- ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾದ ಯುದ್ಧದ ಪರಿಣಾಮವಾಗಿ ದೇಶಾದ್ಯಂತ ಎಲ್ಪಿಜಿ ಸಿಲಿಂಡರ್ ಕೊರತೆ ತೀವ್ರವಾಗುತ್ತಿರುವ ಹಿನ್ನೆಲೆ, ಈ ವಿಚಾರ ರಾಜ್ಯ ಸರ್ಕಾರದ ಹೊಣೆಗಾರಿಕೆ ಅಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದರು. ಗದಗ ನಗರದಲ್ಲಿ ಮಾಧ್ಯಮ
ಫೋಟೋ


ಗದಗ, 16 ಮಾರ್ಚ್ (ಹಿ.ಸ.)

ಆ್ಯಂಕರ್:- ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾದ ಯುದ್ಧದ ಪರಿಣಾಮವಾಗಿ ದೇಶಾದ್ಯಂತ ಎಲ್ಪಿಜಿ ಸಿಲಿಂಡರ್ ಕೊರತೆ ತೀವ್ರವಾಗುತ್ತಿರುವ ಹಿನ್ನೆಲೆ, ಈ ವಿಚಾರ ರಾಜ್ಯ ಸರ್ಕಾರದ ಹೊಣೆಗಾರಿಕೆ ಅಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದರು.

ಗದಗ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಸಿಲಿಂಡರ್ ಕೊರತೆ ವಿಚಾರದಲ್ಲಿ ರಾಜ್ಯ ಸರ್ಕಾರವನ್ನು ಪ್ರಶ್ನಿಸುವುದು ಸರಿಯಲ್ಲ. ಇದು ಅಂತರಾಷ್ಟ್ರೀಯ ಮಟ್ಟದ ಸಮಸ್ಯೆ. ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದ ಇಂಧನ ಸರಬರಾಜಿನ ಮೇಲೆ ಬಿದ್ದಿದೆ,” ಎಂದು ಹೇಳಿದರು.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ತಿಳಿಸಿದರು. “ಕೇಂದ್ರ ಸರ್ಕಾರವೇ ಈ ಸಮಸ್ಯೆಗೆ ಸ್ಪಂದಿಸಬೇಕು. ಅಗತ್ಯ ಕ್ರಮ ಕೈಗೊಳ್ಳಬೇಕು,” ಎಂದು ಅವರು ಒತ್ತಾಯಿಸಿದರು.

ಇಂಧನ ಸಂಕಷ್ಟ ಎದುರಿಸಲು ಮುಂಚಿತ ಸಿದ್ಧತೆಗಳ ಕೊರತೆಯೇ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ ಎಂದು ಪರೋಕ್ಷವಾಗಿ ಸೂಚಿಸಿದ ಜಾರ್ಜ್, “ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದರೆ ಇಂತಹ ಪರಿಸ್ಥಿತಿ ಉಂಟಾಗುತ್ತಿರಲಿಲ್ಲ,” ಎಂದರು.

ಸಚಿವ ಸಂಪುಟ ವಿಸ್ತರಣೆ ವಿಚಾರ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಇದು ಸಂಪೂರ್ಣವಾಗಿ ಮುಖ್ಯಮಂತ್ರಿ ಮತ್ತು ಹೈಕಮಾಂಡ್ಗೆ ಬಿಟ್ಟ ವಿಷಯ. ಈ ಕುರಿತು ನಾನು ಪ್ರತಿಕ್ರಿಯಿಸುವುದಿಲ್ಲ,” ಎಂದು ಹೇಳಿದರು.

ರಾಜಕೀಯ ಅಲ್ಲೋಲ-ಕಲ್ಲೋಲದ ವದಂತಿಗಳಿಗೆ ತಿರುಗೇಟು ಅಧಿವೇಶನದ ಬಳಿಕ ರಾಜ್ಯ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ ಎಂಬ ಆರೋಪಗಳನ್ನು ತಳ್ಳಿ ಹಾಕಿದ ಜಾರ್ಜ್, ಸಂಸದ ಬಸವರಾಜ್ ಬೊಮ್ಮಾಯಿ ಅವರ ಹೇಳಿಕೆಗಳಿಗೆ ತಿರುಗೇಟು ನೀಡಿದರು.

“ರಾಜ್ಯದಲ್ಲಿ ಯಾವುದೇ ಅಲ್ಲೋಲ ಕಲ್ಲೋಲ ಆಗುವುದಿಲ್ಲ. ಬೊಮ್ಮಾಯಿ ಅವರನ್ನ ಕೇಳಿ ಸರ್ಕಾರ ನಡೆಸಲು ಸಾಧ್ಯವೇ? ಅವರು ಮುಖ್ಯಮಂತ್ರಿಯಾಗಿದ್ದವರು, ತಮ್ಮ ಪಕ್ಷದ ಒಳಗಿನ ಪರಿಸ್ಥಿತಿ ಏನೆಂಬುದು ಅವರಿಗೆ ಗೊತ್ತಿದೆ,” ಎಂದು ಹೇಳಿದರು.

“ನಮ್ಮ ಸರ್ಕಾರ ಸ್ಥಿರವಾಗಿದೆ. ಜನರಿಗೆ ಉತ್ತಮ ಆಡಳಿತ ನೀಡುತ್ತಿದ್ದೇವೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande