
ಬೆಂಗಳೂರು, 16 ಮಾರ್ಚ್ (ಹಿ.ಸ.):
ಆ್ಯಂಕರ್:
ರಾಜ್ಯದಾದ್ಯಂತ ಇಂದು ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಿನದ ವೇಳೆಯಲ್ಲಿ ಹೆಚ್ಚಿನ ಭಾಗಗಳಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದ್ದು, ಬಿಸಿಲಿನ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.
ಆದರೆ ರಾಜ್ಯದ ಕೆಲವು ಭಾಗಗಳಲ್ಲಿ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ವಾತಾವರಣದಲ್ಲಿ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ. ಅಲ್ಲಲ್ಲಿ ಗುಡುಗು ಸಹಿತ ಜೋರಾದ ಗಾಳಿ ಬೀಸುವ ಜೊತೆಗೆ ಹಗುರದಿಂದ ಸಾದಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳ ಕೆಲವೆಡೆ ಇಂತಹ ಮಳೆ ಸಾಧ್ಯತೆ ಇರುವುದಾಗಿ ತಿಳಿಸಲಾಗಿದೆ. ಮಳೆಯಾಗುವ ಪ್ರದೇಶಗಳಲ್ಲಿ ಗಂಟೆಗೆ 30–40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಇದರಿಂದಾಗಿ ರೈತರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ವಿಶೇಷವಾಗಿ ಮಳೆ ಹಾಗೂ ಗಾಳಿಯಿಂದ ವಿದ್ಯುತ್ ತಂತಿ, ಮರಗಳ ಕೊಂಬೆಗಳು ಮುರಿಯುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದ ಇರಲು ಸಲಹೆ ನೀಡಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa