ಮಹಿಳೆಯರ ಸಬಲೀಕರಣವೇ ಪ್ರಗತಿಯ ಮೂಲ: ಡಿ.ಕೆ. ಶಿವಕುಮಾರ್
ಬೆಂಗಳೂರು, 16 ಮಾರ್ಚ್ (ಹಿ.ಸ.): ಆ್ಯಂಕರ್: ಮಹಿಳೆಯರ ಸಬಲೀಕರಣವೇ ಸಮಾಜದ ಮತ್ತು ರಾಷ್ಟ್ರದ ಸಮಗ್ರ ಪ್ರಗತಿಯ ಮೂಲವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಸಬಲೀಕರಣ ಹಾಗೂ ಸರ್ವತೋಮುಖ ಅಭಿವೃದ್ಧಿಗಾಗಿ ಆ
Dks


ಬೆಂಗಳೂರು, 16 ಮಾರ್ಚ್ (ಹಿ.ಸ.):

ಆ್ಯಂಕರ್:

ಮಹಿಳೆಯರ ಸಬಲೀಕರಣವೇ ಸಮಾಜದ ಮತ್ತು ರಾಷ್ಟ್ರದ ಸಮಗ್ರ ಪ್ರಗತಿಯ ಮೂಲವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಸಬಲೀಕರಣ ಹಾಗೂ ಸರ್ವತೋಮುಖ ಅಭಿವೃದ್ಧಿಗಾಗಿ ಆಯೋಜಿಸಿದ್ದ ಮಹಿಳಾ ಸಬಲೀಕರಣ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಹಿಳೆಯರು ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಇನ್ನಷ್ಟು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು. ಮಹಿಳೆಯರ ಶಿಕ್ಷಣ, ಉದ್ಯೋಗ ಹಾಗೂ ನಾಯಕತ್ವ ಸಾಮರ್ಥ್ಯವನ್ನು ವೃದ್ಧಿಸುವ ಮೂಲಕ ಸಮಾಜದಲ್ಲಿ ಸಮಾನತೆ ಮತ್ತು ಅಭಿವೃದ್ಧಿಯನ್ನು ಸಾಧಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್‌ನ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತೆಯರು ಹಾಗೂ ಗಣ್ಯರು ಉಪಸ್ಥಿತರಿದ್ದರು. ಮಹಿಳೆಯರ ಹಕ್ಕುಗಳು, ಸಬಲೀಕರಣ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರದ ಕುರಿತು ಚರ್ಚೆ ನಡೆಯಿತು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande