ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡವರ ಮನೆಗೆ ಸಚಿವ ಆರ್.ಬಿ. ತಿಮ್ಮಾಪೂರ ಭೇಟಿ
ಬಾಗಲಕೋಟೆ, 16 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ್ ತಾಲ್ಲೂಕಿನ ಬೆಳಗಲಿ ಪಟ್ಟಣದಲ್ಲಿ ಕೆಲವು ದಿನಗಳ ಹಿಂದೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡವರ ಮನೆಗೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಕುರಿತು
ಸಿಲಿಂಡರ್ ಬ್ಲಾಸ್ಟ್


ಬಾಗಲಕೋಟೆ, 16 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ

ಮುಧೋಳ್ ತಾಲ್ಲೂಕಿನ

ಬೆಳಗಲಿ ಪಟ್ಟಣದಲ್ಲಿ ಕೆಲವು ದಿನಗಳ ಹಿಂದೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡವರ ಮನೆಗೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಕುರಿತು ಸಚಿವರು ಇಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಸ್ಫೋಟದಲ್ಲಿ ಗಾಯಗೊಂಡವರನ್ನು ಭೇಟಿಯಾದ ಸಚಿವರು ಅವರ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದು ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಗಾಯಾಳುಗಳಿಗೆ ಸರ್ಕಾರದಿಂದ ಅಗತ್ಯ ಸಹಾಯ–ಸಹಕಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ್, ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕಿವಡಿ ವಕೀಲರು, ಪಕ್ಷದ ಮುಖಂಡರಾದ ಪ್ರವೀಣ ಪಾಟೀಲ್, ಸಂಗಪ್ಪ ಅಮಾತಿ, ಪ್ರಕಾಶ ಕೊಣ್ಣೂರ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande