ಗುಳೇದಗುಡ್ಡದಲ್ಲಿ ಹಿಂದೂ ಸಮ್ಮೇಳನದ ಅಂಗವಾಗಿ ಬೃಹತ್ ಶೋಭಾಯಾತ್ರೆ
ಬಾಗಲಕೋಟೆ, 16 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಪಟ್ಟಣದಲ್ಲಿ ಹಿಂದೂ ಸಮ್ಮೇಳನ ಸಂಚಾಲನ ಸಮಿತಿ ಆಶ್ರಯದಲ್ಲಿ ಬೃಹತ್ ಶೋಭಾಯಾತ್ರೆ ಭಾನುವಾರ ವೈಭವವಾಗಿ ಜರುಗಿತು. ಶೋಭಾಯಾತ್ರೆಯಲ್ಲಿ ನೂರಾರು ಭಕ್ತರು ಹಾಗೂ ಯುವಕರು ಮಹಿಳೆಯರು ಭಾಗವಹಿಸಿ ಧಾರ್ಮಿಕ ಘೋಷಣೆಗಳೊಂದಿಗೆ ನಗರ ಪ್ರಮುಖ ಬೀದಿಗಳ
ಶೋಬಾಯಾತಗರೆ


ಬಾಗಲಕೋಟೆ, 16 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಪಟ್ಟಣದಲ್ಲಿ ಹಿಂದೂ ಸಮ್ಮೇಳನ ಸಂಚಾಲನ ಸಮಿತಿ ಆಶ್ರಯದಲ್ಲಿ ಬೃಹತ್ ಶೋಭಾಯಾತ್ರೆ ಭಾನುವಾರ ವೈಭವವಾಗಿ ಜರುಗಿತು.

ಶೋಭಾಯಾತ್ರೆಯಲ್ಲಿ ನೂರಾರು ಭಕ್ತರು ಹಾಗೂ ಯುವಕರು ಮಹಿಳೆಯರು ಭಾಗವಹಿಸಿ ಧಾರ್ಮಿಕ ಘೋಷಣೆಗಳೊಂದಿಗೆ ನಗರ ಪ್ರಮುಖ ಬೀದಿಗಳಲ್ಲಿ ಶೋಭಾ ಯಾತ್ರೆ ಮೆರವಣಿಗೆ ನಡೆಸಿದರು.

ವಿವಿಧ ದೇವರ ಮೂರ್ತಿಗಳ ಅಲಂಕೃತ ರಥಗಳು, ಭಜನಾ ಮಂಡಳಿಗಳು ಹಾಗೂ ಸಾಂಪ್ರದಾಯಿಕ ಕಲಾ ತಂಡಗಳು ಮೆರವಣಿಗೆಯ ಆಕರ್ಷಣೆಯಾಗಿ ಕಾಣಿಸಿಕೊಂಡವು.

ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿದ ಈ ಶೋಭಾಯಾತ್ರೆ ಧಾರ್ಮಿಕ ಭಕ್ತಿಭಾವದ ವಾತಾವರಣ ಸೃಷ್ಟಿಸಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande