ಮಾರ್ಚ್ 18 ರಂದು ಆರೋಗ್ಯ ಜಾಗೃತಿ ವಾಕಥಾನ್
ಬಳ್ಳಾರಿ, 16 ಮಾರ್ಚ್ (ಹಿ.ಸ.) ಆ್ಯಂಕರ್: ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯ ಬಳ್ಳಾರಿ - ವಿಜಯನಗರ ಜಿಲ್ಲೆಗಳ ವಿವಿಧ ಕಾಲೇಜುಗಳ ಜಂಟಿ ಆಶ್ರಯದಲ್ಲಿ ನಶಾ ಮುಕ್ತ ಭಾರತ, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್ ಮತ್ತು ಮಾನವ ಅಂಗಾಂಗ ದಾನದ ಜಾಗೃತಿ ವಾಕಥಾನ್ ಮಾರ್ಚ್ 18
ಮಾರ್ಚ್ 18 ರಂದು ಆರೋಗ್ಯ ಜಾಗೃತಿ ವಾಕಥಾನ್


ಬಳ್ಳಾರಿ, 16 ಮಾರ್ಚ್ (ಹಿ.ಸ.)

ಆ್ಯಂಕರ್: ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯ ಬಳ್ಳಾರಿ - ವಿಜಯನಗರ ಜಿಲ್ಲೆಗಳ ವಿವಿಧ ಕಾಲೇಜುಗಳ ಜಂಟಿ ಆಶ್ರಯದಲ್ಲಿ ನಶಾ ಮುಕ್ತ ಭಾರತ, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್ ಮತ್ತು ಮಾನವ ಅಂಗಾಂಗ ದಾನದ ಜಾಗೃತಿ ವಾಕಥಾನ್ ಮಾರ್ಚ್ 18ರ ಬುಧವಾರ ನಡೆಯಲಿದೆ.

ತಾರಾನಾಥ ಸರ್ಕಾರಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ರಾಜಶೇಖರ ಗಾಣಿಗಾರ ಅವರು ಸುದ್ದಿಗಾರರಿಗೆ ಸೋಮವಾರ ಈ ಮಾಹಿತಿ ನೀಡಿದ್ದು, ರಾಜ್ಯಪಾಲ ಥಾವರಚಂದ್ ಅವರು ಮಾರ್ಚ್ 18ರ ಬೆಳಗ್ಗೆ 7.30 ಕ್ಕೆ ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆವರಣದಲ್ಲಿ ವಾಕಥಾನ್ಗೆ ಚಾಲನೆ ನೀಡಲಿದ್ದಾರೆ ಎಂದರು.

ಕಲ್ಯಾಣ ಸ್ವಾಮಿಗಳು, ಬಿಷಪ್ ಹೆನ್ರಿ ಡಿ'ಸೋಜಾ ಅವರು ಸಾನಿಧ್ಯವಹಿಸಲಿದ್ಧಾರೆ. ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಬಿ.ಸಿ. ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಕರ್ನಾಟಕದ 13 ಜಿಲ್ಲೆಗಳ 15 ಸ್ಥಳಗಳಲ್ಲಿ 77 ಸಾವಿರಕ್ಕೂ ಹೆಚ್ಚಿನ ಜನರ ಪಾಲ್ಗೊಳ್ಳುವಿಕೆಯಿಂದ ವಾಕಥಾನ್ ನಡೆದಿದೆ. ಬಳ್ಳಾರಿ - ವಿಜಯನಗರ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ, ದಂತ ವೈದ್ಯಕೀಯ, ಹೋಮಿಯೋಪತಿ, ಹೆಲ್ತ್ ಅಲೈಡ್ ಸೈನ್ಸ್ನ 25 ಕ್ಕೂ ಹೆಚ್ಚಿನ ಸಂಸ್ಥೆಗಳ ವಿದ್ಯಾರ್ಥಿಗಳು - ಅಧ್ಯಾಪಕರು ಈ ವಾಕಥಾನ್ನಲ್ಲಿ ಪಾಲ್ಗೊಳ್ಳಲಿದ್ದಾರೆ. ವಾಕಥಾನ್ ಕಿತ್ತೂರು ರಾಣಿ ಚೆನ್ನಮ್ಮ ಪ್ರೌಢಶಾಲೆಯ ಆವರಣದಲ್ಲಿ ಸಮಾರೋಪಗೊಳ್ಳಲಿದೆ ಎಂದರು.

ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ. ಯೋಗಾನಂದ ರೆಡ್ಡಿ, ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಎನ್. ಮಂಜುನಾಥ್, ಡಾ. ಭಾರತಿ, ಡಾ. ಷಡ್ರಕ್, ಡಾ. ಸೋಮಶೇಖರ್, ಡ. ಸುಮಾ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande