ನಾಳೆ ಕೊಪ್ಪಳದಲ್ಲಿ ಉದ್ಯೋಗ ಮೇಳ
ಕೊಪ್ಪಳ, 16 ಮಾರ್ಚ್ (ಹಿ.ಸ.) ಆ್ಯಂಕರ್: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯ
ನಾಳೆ ಕೊಪ್ಪಳದಲ್ಲಿ ಉದ್ಯೋಗ ಮೇಳ


ಕೊಪ್ಪಳ, 16 ಮಾರ್ಚ್ (ಹಿ.ಸ.)

ಆ್ಯಂಕರ್: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಡಿಡಿಯು-ಜಿಕೆವೈ ಯೋಜನೆಯಡಿಯಲ್ಲಿ ಮಾ.17 ರಂದು ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ನಡೆಸುವರು. ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಮಂತ್ರಿಗಳಾದ ಶರಣಪ್ರಕಾಶ ರುದ್ರಪ್ಪ ಪಾಟೀಲ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಸಚಿವರಾದ ಪ್ರಿಯಾಂಕ ಖರ್ಗೆ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.

ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ವಿ. ಗಡಾದ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಮನೋಜ್ ಕುಮಾರ್ ಮೀನಾ, ವಸತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ. ಪಿ ಮೋಹನ್ರಾಜ್, ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಯುಕ್ತರು ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ರಾಗಪ್ರಿಯ ಆರ್, ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಭಿಯಾನ ನಿರ್ದೇಶಕರಾದ ವಾಸರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರು ಆಗಮಿಸುವರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸುರೇಶ್ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣೀತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣಮೂರ್ತಿ ಟಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮನ್ಸೂರ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಮಂಜುಳಾ ಉಪ್ಪಾರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಗವಿಶಂಕರ್ ಕೆ. ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವಾಯ್.ಬಿ. ಅಂಗಡಿ ಅವರು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

-------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande