ಕಾಣೆಯಾದ ಬಾಲಕನ ಪತ್ತೆಗೆ ಮನವಿ
ಬಳ್ಳಾರಿ, 16 ಮಾರ್ಚ್ (ಹಿ.ಸ.) ಆ್ಯಂಕರ್: ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ 2 ನೇ ವಾರ್ಡ್ ನ ಮಸೀದಿ ಹಿಂದೆ ಸಂಗನಕಲ್ಲು ಗ್ರಾಮದ ನಿವಾಸಿ ಗಗನ್ ದೀಪ್ (16) ಮಾ.15 ರಂದು ಮನೆಯಿಂದ ಹೋದವನು ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದ
ಕಾಣೆಯಾದ ಬಾಲಕನ ಪತ್ತೆಗೆ ಮನವಿ


ಬಳ್ಳಾರಿ, 16 ಮಾರ್ಚ್ (ಹಿ.ಸ.)

ಆ್ಯಂಕರ್: ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ 2 ನೇ ವಾರ್ಡ್ ನ ಮಸೀದಿ ಹಿಂದೆ ಸಂಗನಕಲ್ಲು ಗ್ರಾಮದ ನಿವಾಸಿ ಗಗನ್ ದೀಪ್ (16) ಮಾ.15 ರಂದು ಮನೆಯಿಂದ ಹೋದವನು ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.

ಬಾಲಕನ ಚಹರೆ:

ಎತ್ತರ 4.5 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ತಿಳಿ ಹಸಿರು ಬಣ್ಣದ ಅರ್ಧ ತೋಳಿನ ಟಿ-ಶರ್ಟ್ ಹಾಗೂ ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ, ಇಂಗ್ಲೀಷ್ ಭಾಷೆ ಮಾತನಾಡುತ್ತಾನೆ.

ಬಾಲಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ದೂ.083922764661, 9480803049, ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande