ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ
ಶಿವಮೊಗ್ಗ, 17 ಮಾರ್ಚ್ (ಹಿ.ಸ.): ಆ್ಯಂಕರ್: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರ
ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ


ಶಿವಮೊಗ್ಗ, 17 ಮಾರ್ಚ್ (ಹಿ.ಸ.):

ಆ್ಯಂಕರ್:

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಏಪ್ರಿಲ್ ತಿಂಗಳ 4 ನೇ ತಾರೀಖಿನಿಂದ ಪ್ರಾರಂಭಿಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಈ ಶಿಬಿರದಲ್ಲಿ ಪಾನಿ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಪ್ರೈಡ್ ರೈಸ್, ಸಮೋಸ ಇನ್ನಿತರೆ ಚಾಟ್ಸ್ ಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ : 27/03/2026 ಬುಧವಾರ ಬೆಳಿಗ್ಗೆ 9.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ : 27/03/2026 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050/9591514154/9686248369/ 6363139123/9505894247 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande