
ಗದಗ, 17 ಮಾರ್ಚ್ (ಹಿ.ಸ.)
ಆ್ಯಂಕರ್:- 2026 ನೇ ಸಾಲಿನ ಯುಗಾದಿ ಮತ್ತು ರಂಜಾನ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ, ವಾ.ಕ.ರ.ಸಾ.ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 171 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ದಿನಾಂಕ: 18-03-2026 ರಂದು ಬುಧವಾರ ಮತ್ತು ದಿ: 19-03-2026 ರಂದು ಗುರುವಾರ ಯುಗಾದಿ, ದಿ: 21-03-2026 ರಂದು ಶನಿವಾರ ರಂಜಾನ್ ಹಬ್ಬ ಹಾಗೂ ದಿ: 22-03-2026 ರಂದು ಭಾನುವಾರವಿರುವುದರಿಂದ ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು.
ಬೆಂಗಳೂರಿನಿಂದ ರಾಜ್ಯ, ಅಂತರರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ದಿನಾಂಕ: 18-03-2026 ರಿಂದ ದಿ:20-03-2026 ವರೆಗೆ ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಈ ವಿಶೇಷ ಸಾರಿಗೆಗಳ ಸದುಪಯೋಗ ಪಡಿಸಿಕೊಳ್ಳುವದರೊಂದಿಗೆ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP