
ಬಾಗಲಕೋಟೆ, 17 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದು, ಜಿಲ್ಲೆಯಾದ್ಯಂತ ವಾಹನ ತಪಾಸಣೆ ತೀವ್ರಗೊಳಿಸಲಾಗಿದೆ.
ಜಿಲ್ಲಾ ಪೊಲೀಸ್ ಇಲಾಖೆ ಪ್ರಮುಖ ಸ್ಥಳಗಳಲ್ಲಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಿ, ಸಂಚಾರದಲ್ಲಿರುವ ವಾಹನಗಳ ಸಮಗ್ರ ಪರಿಶೀಲನೆ ನಡೆಸುತ್ತಿದೆ. ಅಕ್ರಮ ಹಣ, ಮದ್ಯ ಹಾಗೂ ಇತರೆ ನಿಷೇಧಿತ ವಸ್ತುಗಳ ಸಾಗಣೆಯನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಪಾಸಣೆ ವೇಳೆ ವಾಹನಗಳ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು, ಅನುಮಾನಾಸ್ಪದ ಚಲನವಲನಗಳ ಮೇಲೆ ವಿಶೇಷ ನಿಗಾ ಇಡಲಾಗಿದೆ.
ಸಾರ್ವಜನಿಕರು ತಮ್ಮ ವಾಹನಗಳಲ್ಲಿ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಹಾಗೂ ತಪಾಸಣೆ ಸಂದರ್ಭದಲ್ಲಿ ಪೊಲೀಸರೊಂದಿಗೆ ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande