
ನವದೆಹಲಿ, 17 ಮಾರ್ಚ್ (ಹಿ.ಸ.):
ಆ್ಯಂಕರ್:
ಯುಕೆಪಿ, ಮಹದಾಯಿ, ತುಂಗಭದ್ರಾ, ಮೇಕೆದಾಟು ಯೋಜನೆಗಳ ಬಗ್ಗೆ ಅಡೆತಡೆಗಳ ನಿವಾರಣೆಗೆ ಕೈಗೊಳ್ಳಬೇಕಾದ ಕಾನೂನು ಕ್ರಮಗಳ ಬಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರ್ನಾಟಕ ಪರ ವಕೀಲರೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಹೆಚ್.ಕೆ. ಪಾಟೀಲ್, ಬೋಸರಾಜು, ದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮತ್ತಿತರ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa