
ಬಳ್ಳಾರಿ, 17 ಮಾರ್ಚ್ (ಹಿ.ಸ.)
ಆ್ಯಂಕರ್: ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಭವಿಷ್ಯ ನಿಧಿ ನಿಮ್ಮ ಹತ್ತಿರಕ್ಕೆ ಎಂಬ ಅಂಶದಡಿ ಮಾ.27 ರಂದು ಬೆಳ್ಳಿಗೆ 09 ರಿಂದ ಸಂಜೆ 06 ಗಂಟೆಯವರೆಗೆ ನಗರದ ಕೆಎಸ್ಆರ್ಟಿಸಿ ಸಂಸ್ಥೆಯಲ್ಲಿ ``ನಿಧಿ ಆಪ್ಕೆ ನಿಕಟ್ : ಭವಿಷ್ಯ ನಿಧಿ ನಿಮ್ಮ ಹತ್ತಿರಕ್ಕೆ’ೆ ಎಂಬ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಕಾರ್ಮಿಕರ, ಪಿಂಚಣೆದಾರರ ಮತ್ತು ಉದ್ಯೋಗದಾತರರ ಕುಂದು ಕೊರತೆ ಪರಿಹಾರ ಮಾಹಿತಿ ವಿನಿಮಯ ಮಾಡಿಕೊಳ್ಳಬಹುದು, ಮತ್ತು ಅರಿವು ಮೂಡಿಸುವ ಹಾಗೂ ಪ್ರಭಾವಬೀರುವ ಕಾರ್ಯಕ್ರಮವಾಗಿದೆ.
ಉದ್ಯೋಗದಾತರ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಅರಿವು, ಕಾರ್ಮಿಕರಿಗೆ ಮತ್ತು ಉದ್ಯೋಗದಾತರಿಗೆ, ಪ್ರಧಾನ ಉದ್ಯೋಗದಾತರಿಗೆ ಮತ್ತು ಗುತ್ತಿಗೆದಾರರಿಗೆ ಲಭ್ಯವಿರುವ ಆನ್ಲೈನ್ ಸೇವೆಗಳ ಮಾಹಿತಿ, ಹೊಸ ಉಪಕ್ರಮಗಳು ಹಾಗೂ ಸುಧಾರಣೆ ಕ್ರಮಗಳ ಕುರಿತು ಮಾಹಿತಿ ಸಹ ಒದಗಿಸಲಾಗುತ್ತದೆ.
ಹಾಗಾಗಿ ಕಾರ್ಮಿಕರು ಪಂಚಣಿದಾರರು, ಉದ್ಯೋಗದಾತರು ಮಾ.27 ರಂದು ನಡೆಯುವ ನಿಧಿ ಆಪ್ಕೆ ನಿಕಟ್: ಭವಿಷ್ಯ ನಿಧಿ ನಿಮ್ಮ ಹತ್ತಿರಕ್ಕೆ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಾದೇಶಿಕ ಭವಿಷ್ಯ ನಿಧಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಆಯುಕ್ತ ಕೆ.ವಿ. ಪ್ರವೀಣ್ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್