ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಾಳಜಿ ವಹಿಸಿ: ನ್ಯಾ. ಹೆಚ್.ಎ.ಸಾತ್ವಿಕ್
ರಾಯಚೂರು , 17 ಮಾರ್ಚ್ (ಹಿ.ಸ.): ಆ್ಯಂಕರ್ : ಗ್ರಾಹಕರ ಹಕ್ಕುಗಳ ಚಲಾವಣೆ ಜೊತೆಗೆ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು. ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕೆಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗೌ
Everyone should take care of environmental protection.


Everyone should take care of environmental protection.


ರಾಯಚೂರು , 17 ಮಾರ್ಚ್ (ಹಿ.ಸ.):

ಆ್ಯಂಕರ್ : ಗ್ರಾಹಕರ ಹಕ್ಕುಗಳ ಚಲಾವಣೆ ಜೊತೆಗೆ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು. ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕೆಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ ಹೆಚ್.ಎ.ಸಾತ್ವಿಕ್ ಅವರು ಹೇಳಿದ್ದಾರೆ.

ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ 2026ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ಲಾಸ್ಟಿಕ್ ಬಳಕೆಯಲ್ಲಿ ರಾಯಚೂರಿನ ಸದರ್ ಬಜಾರ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳೆಂಬೆಳ್ಳಿಗ್ಗೆ ಎಲ್ಲೆಂದರಲ್ಲಿ ರಾಶಿ ರಾಶಿಯ ಪ್ಲಾಸ್ಟಿಕ್ ನೋಡಬಹುದಾಗಿದೆ. ಇದನ್ನು ನಿಯಂತ್ರಿಸಲು ಕೇವಲ ಅಧಿಕಾರಿಗಳಿಂದ ಸಾಧ್ಯವಿಲ್ಲ. ಗ್ರಾಹಕರು ಸ್ವಯಂ ಪ್ರೇರಿತವಾಗಿ ಬಳಕೆಯನ್ನು ಕಡಿಮೆ ಮಾಡಬೇಕೆಂದರು.

ರಾಯಚೂರು ಜಿಲ್ಲೆದಂದ್ಯಾತ ಕೆಟ್ಟ ಎಣ್ಣೆಯಲ್ಲಿ ಮಿರ್ಚಿ, ಗೋಬಿ ಮಂಚೂರಿ ಸೇರಿದಂತೆ ಇತರೆ ಆಹಾರ ಪದಾರ್ಥಗಳನ್ನು ತಯಾರಿಸುತ್ತಿದ್ದು, ಇದರಿಂದಾಗಿ ಗ್ರಾಹಕರ ಆರೋಗ್ಯ ಮೇಲೆ ಪ್ರಭಾವ ಬೀರುತ್ತದೆ. ವ್ಯಾಪಾರಸ್ಥರು ಗ್ರಾಹಕರ ಆರೋಗ್ಯ ಕಡೆ ಗಮನಹರಿಸಬೇಕು. ಕೇವಲ ಲಾಭದ ಕಡೆ ಗಮನಹರಿಸಬಾರದು ಎಂದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಗೌರವಾನ್ವಿತ ಕೆ.ವಿ.ಸುರೇಂದ್ರ ಬಾಬು ಅವರು ಮಾತನಾಡಿ, ವ್ಯಾಪಾರಸ್ಥರು ವಸ್ತುಗಳಿಗೆ ನಿಗದಿತ ಬೆಲೆಗಿಂತ ಹೆಚ್ಚಿನ ದರ ಪಡೆಯುವಂತಿಲ್ಲ. ವಸ್ತುಗಳು ದೋಷದಿಂದ ಕೂಡಿದ್ದರೆ ಪ್ರಶ್ನೆ ಮಾಡುವ ಹಕ್ಕು ಗ್ರಾಹಕರಿಗಿದೆ. ಅವಧಿ ಮೀರಿದ ಉತ್ಪನ್ನಗಳನ್ನು ನೀಡಿದರೆ ಅಂತಹವರ ಮೇಲೆ ಗ್ರಾಹಕರ ಆಯೋಗದಲ್ಲಿ ಪ್ರಕರಣ ದಾಖಲಿಸಿ ಪರಿಹಾರ ಪಡೆಯಬಹುದು. ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ ಹಾಗೂ ರಾಜ್ಯ ಆಯೋಗದಲ್ಲಿ ಇತ್ತಿಷ್ಟು ಪರಿಹಾರ ಪಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗ್ರಾಹಕರ ಹಕ್ಕುಗಳನ್ನು ಅರಿಯಬೇಕು ಎಂದರು.

ಇಂದಿನ ದಿನಗಳಲ್ಲಿ ಸಾಕಷ್ಟು ಜನರು ವ್ಯಾಪಾರಕ್ಕಾಗಿ ಆನ್ಲೈನ್ ಮೊರೆ ಹೋಗುತ್ತಿರುವುದನ್ನು ಕಾಣಬಹುದು. ಅಂಗಡಿಗಳಿಂದ ವಸ್ತುಗಳನ್ನು . ಬ್ಯಾಂಕಿಂಗ್ ಹಾಗೂ ವಿಮಾ ಸೌಲಭ್ಯಗಳನ್ನು ಪಡೆಯುವಲ್ಲಿ ಮೋಸ ಹೋಗದಂತೆ ಎಚ್ಚರ ವಹಿಸುವ ನಿಟ್ಟಿನಲ್ಲಿ ಈ ಬಾರಿಯ ವಿಶ್ವ ಗ್ರಾಹಕರ ದಿನವನ್ನು ಸುರಕ್ಷಿತ ಉತ್ಪನ್ನಗಳು ಆತ್ಮವಿಶ್ವಸದ ಗ್ರಾಹಕರು’ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದರು.

ಈ ವೇಳೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಗೌರವಾನ್ವಿತ ಪ್ರಭುದೇವ್ ಪಾಟೀಲ್ ಅವರು ಮಾತನಾಡಿ, ದೈನಂದಿನ ಜೀವನದಲ್ಲಿ ಪ್ರತಿಯೊಬ್ಬರೂ ಗ್ರಾಹಕರೇ. ಗ್ರಾಹಕರಿಗೆ ನ್ಯಾಯಯುತ, ಯೋಗ್ಯ ಹಾಗೂ ಗುಣಮಟ್ಟದ ಸರಕು ಮತ್ತು ಸೇವೆಗಳನ್ನು ನೀಡುವ ಜವಾಬ್ದಾರಿ ವ್ಯಾಪಾರಸ್ಥರದ್ದು. ಯಾವುದೇ ವಸ್ತುಗಳನ್ನು ಕೊಡುವವನ ತೃಪ್ತಿಗಾಗಿ ಕೊಳ್ಳುವುದಲ್ಲ, ಅಲ್ಲಿ ಗ್ರಾಹಕರ ಸಂತೃಪ್ತಿಯೇ ಮುಖ್ಯ. ಸುರಕ್ಷತೆ, ಆಯ್ಕೆ ಹಾಗೂ ಆರೋಗ್ಯಪೂರ್ಣ ಪರಿಸರ ಹೊಂದುವ ಹಕ್ಕನ್ನು ಕಾಯ್ದೆಯು ಎಲ್ಲ ಗ್ರಾಹಕರಿಗೂ ನೀಡಿದೆ ಎಂದರು.

ಅಡುಗೆ ಅನಿಲದ ಕೊರತೆ ಇಲ್ಲ: ಜಿಲ್ಲೆಯಲ್ಲಿ ಅಡುಗೆ ಅನಿಲದ ದಾಸ್ತಾನು ಹೇರಳವಾಗಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಆತಂಕದಿಂದ ಅತಿಯಾಗಿ ಗ್ಯಾಸ್ ಬುಕಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಇದರಿಂದಾಗಿ ವ್ಯವಸ್ಥೆ ಮೇಲೆ ಒತ್ತಡ ಉಂಟಾಗುತ್ತದೆ. ಜಿಲ್ಲೆಯಲ್ಲಿ ಇದಕೂ ಮುಂಚೆ ಪ್ರತಿ ತಿಂಗಳು 6-7 ಸಾವಿರ ಬುಕಿಂಗ್ ಆಗುತ್ತಿದ್ದು, ಪ್ರಸ್ತುತ 10-12 ಸಾವಿರಕ್ಕೂ ಹೆಚ್ಚಿನ ಮಟ್ಟದಲ್ಲಿ ಬುಕ್ಕಿಂಗ್ ಆಗುತ್ತಿವೆ. ಎಲ್ಲರಿಗೂ ಎಲ್ಪಿಜಿ ದೊರೆಯುತ್ತದೆ. ಯಾರು ಆತಂಕಕ್ಕೆ ಒಳಗಬಾರದೆಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ನಜೀರ್ ಅಹಮದ್ ಅವರು ಹೇಳಿದರು.

ಸಾರ್ವಜನಿಕರಿಗೆ ಜಾಗೃತಿ: ಕರ್ನಾಟಕ ಆಹಾರ ನಾಗರಿಕ ಮತ್ತು ಸರಬರಾಜು ನಿಗಮ ನಿಯಮಿತದಿಂದ ಸಾರ್ವಜನಿಕ ವಿತರಣೆಯಡಿ ವಿತರಿಸಲಾದ ಸಾರವರ್ಧಿತ ಅಕ್ಕಿಯ ಕುರಿತು, ಕಾನೂನು ಮಾಪನ ಶಾಸ್ತ್ರ ಇಲಾಖೆಯಿಂದ ತೂಕ ಮತ್ತು ಅಳತೆ ಹಾಗೂ ಮೆ: ಸುಮಂತ್ ಫ್ಲಾಮೋಜನ್ ಇಂಡೇನ್ ಗ್ಯಾಸ್ ಏಜೆನ್ಸಿಯಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯ ಎಲ್.ಪಿ.ಜಿ ಸುರಕ್ಷತೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ಈ ವೇಳೆ ವಕೀಲರಾದ ತಿಮ್ಮಪ್ಪ ಹಾಗೂ ಕುಮಾರಿ ಮೋನಿಷಾ ಅವರಿಂದ ವಿಶ್ವ ಗ್ರಾಹಕರ ದಿನಾಚರಣೆ 2026ರ ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸನ ನೀಡಿದರು.

ಸಂದರ್ಭದಲ್ಲಿ ಜಿಲ್ಲಾ ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷರಾದ ನಜೀರ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟ್ರಾರ್ ಮತ್ತು ಸಹಾಯಕ ಆಡಳಿತಾಧಿಕಾರಿಗಳಾದ ಚಂದ್ರಕಾಂತ,

ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಅಮೃತಾ ಪಿ.ಚವ್ಹಾಣ, ಕರ್ನಾಟಕ ಆಹಾರ ನಾಗರಿಕ ಮತ್ತು ಸರಬರಾಜು ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರಾದ ಪ್ರಕಾಶ್, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ವ್ಯವಸ್ಥಾಪಕರಾದ ಶ್ರೀ ಹರೀಶ್, ಪ್ರಥಮ ದರ್ಜೆ ಸಹಾಯಕರಾದ ಜಿ.ಹರೀಶ್ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande