
ಬಳ್ಳಾರಿ, 17 ಮಾರ್ಚ್ (ಹಿ.ಸ.)
ಆ್ಯಂಕರ್: ಬಳ್ಳಾರಿ ನಗರ ಜೆಸ್ಕಾಂ ಉಪ ವಿಭಾಗ-1 ಮತ್ತು 2 ರ ವ್ಯಾಪ್ತಿಯ ಹೆಚ್.ಟಿ ಮತ್ತು ಇ.ಹೆಚ್.ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ಸಭೆಯನ್ನು ಮಾ.18 ರಂದು ಬೆಳಿಗ್ಗೆ 11 ಗಂಟೆಗೆ ವಲಯ ಕಚೇರಿ ಮೊದಲ ಮಹಡಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಬಳ್ಳಾರಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವೃತ್ತದ ಅಧೀಕ್ಷಕ ಅಭಿಯಂತರರು (ವಿ) ಅಧ್ಯಕ್ಷತೆ ವಹಿಸುವರು.
ಸಭೆಗೆ ನಗರದ ಎಲ್ಲಾ ಹೆಚ್.ಟಿ ಮತ್ತು ಇ.ಹೆಚ್.ಟಿ ವಿದ್ಯುತ್ ಗ್ರಾಹಕರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್