
ಬಾಗಲಕೋಟೆ, 17 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ನದಾಮಿ ಪಟ್ಟಣದ ಸರ್ಕಾರಿ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿದ್ದ ಡಾ. ವಿ.ಕೆ. ಶೆಟ್ಟರ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಿ.ಎಚ್.ಒ ಮಂಜುನಾಥ ಡಿ.ಎನ್. ಆದೇಶ ಹೊರಡಿಸಿದ್ದಾರೆ.
ಡಾ. ಶೆಟ್ಟರ ವಿರುದ್ಧ ಅನುದಾನ ದುರ್ಬಳಕೆ ಆರೋಪ, ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತನೆ, ಹಾಗೂ ಪತ್ರಕರ್ತರಿಗೆ ಅಶ್ಲೀಲ ಪದ ಬಳಕೆ ಮಾಡಿದ ಕುರಿತು ಗಂಭೀರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ಕುರಿತು ಸಾರ್ವಜನಿಕರಿಂದ ಬಂದ ದೂರಿನ ಆಧಾರದ ಮೇಲೆ ಪರಿಶೀಲನೆ ನಡೆಸಿದ ನಂತರ, ಅವರನ್ನು ತಕ್ಷಣದಿಂದಲೇ ಆಡಳಿತ ವೈದ್ಯಾಧಿಕಾರಿ ಹುದ್ದೆಯಿಂದ ಬಿಡುಗಡೆಗೊಳಿಸುವಂತೆ ಡಿ.ಎಚ್.ಒ ಆದೇಶಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande