ಪ್ರಧಾನ ಮಂತ್ರಿಗಳ 15 ಅಂಶಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಬೇಡ - ಡಾ. ಸುರೇಶ ಬಿ. ಇಟ್ನಾಳ
ಕೊಪ್ಪಳ, 17 ಮಾರ್ಚ್ (ಹಿ.ಸ.) ಆ್ಯಂಕರ್: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲಾ ಇಲಾಖೆಗಳು ಹೆಚ್ಚಿನ ಆದ್ಯತೆ ನೀಡಬೇಕು. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ನಿರ್ಲಕ್ಷ್ಯ ಬೇಡ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ
ಪ್ರಧಾನ ಮಂತ್ರಿಗಳ 15 ಅಂಶಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಬೇಡ - ಡಾ. ಸುರೇಶ ಬಿ. ಇಟ್ನಾಳ


ಪ್ರಧಾನ ಮಂತ್ರಿಗಳ 15 ಅಂಶಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಬೇಡ - ಡಾ. ಸುರೇಶ ಬಿ. ಇಟ್ನಾಳ


ಪ್ರಧಾನ ಮಂತ್ರಿಗಳ 15 ಅಂಶಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಬೇಡ - ಡಾ. ಸುರೇಶ ಬಿ. ಇಟ್ನಾಳ


ಕೊಪ್ಪಳ, 17 ಮಾರ್ಚ್ (ಹಿ.ಸ.)

ಆ್ಯಂಕರ್: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲಾ ಇಲಾಖೆಗಳು ಹೆಚ್ಚಿನ ಆದ್ಯತೆ ನೀಡಬೇಕು. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ನಿರ್ಲಕ್ಷ್ಯ ಬೇಡ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ 3ನೇ ತ್ರೈಮಾಸಿಕ (ಅಕ್ಟೋಬರ್-2025 ರಿಂದ ಡಿಸೆಂಬರ್-2025) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮವು ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಪಾರ್ಸಿ ಹಾಗೂ ಬೌದ್ಧ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ರೂಪಿಸಲಾದ ಪ್ರಮುಖ ಯೋಜನೆಯಾಗಿದೆ. ಈ ಯೋಜನೆಗಳಡಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಉಚಿತ ಪರೀಕ್ಷಾ ಪೂರ್ವ ತರಬೇತಿ, ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ಸೇರಿದಂತೆ ವಿವಿಧ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಆಯಾ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಕೊಪ್ಪಳ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಸಾಧಿಸಿರುವ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಕೆಲವು ಇಲಾಖೆಗಳ ಸಾಧನೆ ತೃಪ್ತಿಕರವಾಗಿಲ್ಲವೆಂದು ಸೂಚಿಸಿ, ನಿಗದಿತ ಗುರಿಯಂತೆ ಪ್ರಗತಿ ಸಾಧನೆಗೆ ವಿಳಂಬವಾಗುತ್ತಿರುವ ಯೋಜನೆಗಳನ್ನು ಆದ್ಯತೆ ಮೆರೆಗೆ ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಕೇವಲ ವರದಿಗಳಲ್ಲೇ ಪ್ರಗತಿ ತೋರಿಸುವುದಕ್ಕಿಂತ ನೆಲಮಟ್ಟದಲ್ಲಿ ಸ್ಪಷ್ಟ ಫಲಿತಾಂಶ ಕಾಣುವಂತೆ ಇಲಾಖೆಗಳ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿಶೇಷ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ನಿವೇಶನ, ಮನೆಗಳ ಹಂಚಿಕೆ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಯೋಜನೆಗಳು ಸೇರಿದಂತೆ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಮೀರ್ ಅಲಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮಾರುತಿ, ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ನಜೀರಸಾಬ್ ಮೂಲಿಮನಿ, ಮೆಹಬೂಬ್ ಪಾಷಾ ಮಾನ್ವಿ ಹಾಗೂ ಮತ್ತಿತರರು ಸೇರಿದಂತೆ ವಿವಿಧ ಇಲಾಖೆಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande