
ಬೆಂಗಳೂರು, 17 ಮಾರ್ಚ್ (ಹಿ.ಸ.):
ಆ್ಯಂಕರ್:
ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು 2025-26ನೇ ಸಾಲಿನ 'ವಿಶ್ವ ವಿಕಲಚೇತನರ ದಿನಾಚರಣೆ' ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಂಸ್ಥೆಗಳು, ವಿಶೇಷ ಶಿಕ್ಷಕರು ಹಾಗೂ ಸಾಧಕ ವಿಕಲಚೇತನ ವ್ಯಕ್ತಿಗಳಿಗೆ ರಾಜ್ಯ ಪ್ರಶಸ್ತಿ ನೀಡುವ ಕುರಿತು ಸಚಿವೆ ಲಕ್ಷ್ಮೀ ಹೆಬ್ಯ ಆಯ್ಕೆ ಸಮಿತಿಯ ಮಹತ್ವದ ಸಭೆ ನಡೆಸಿದರು.
ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿಗಳಾದ ಡಾ.ಶಾಮ್ಲಾ ಇಕ್ಬಾಲ್, ವಿಕಲ ಚೇನತರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಡಿ.ಆರ್. ಅಶೋಕ್ ಕುಮಾರ್, ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ.ಕೆ.ವಸಂತ ಕುಮಾರ್, ಚಿದಾನಂದ್, ಶಶಿಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa