ಬಾಗಲಕೋಟೆ–ವಿಜಯಪುರ ಅವಳಿ ಜಿಲ್ಲೆಗಳಲ್ಲಿ ಆಲಿಕಲ್ಲು ಸಮೇತ ಭಾರಿ ಗಾಳಿ-ಮಳೆ
ವಿಜಯಪುರ, 17 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಹಾಗೂ ವಿಜಯಪುರ ಅವಳಿ ಜಿಲ್ಲೆಗಳಲ್ಲಿ ಮಂಗಳವಾರ ಆಲಿಕಲ್ಲು ಸಮೇತ ಭಾರಿ ಗಾಳಿ-ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವೆಡೆ ಬಿರುಗಾಳಿ ಸಹ ಬೀಸಿದ ಪರಿಣಾಮ ಹಾನಿ ಉಂಟಾದ ವರದಿಗಳು ಕೇಳಿಬಂದಿವೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ
ರೈನ್


Rain


ವಿಜಯಪುರ, 17 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಹಾಗೂ ವಿಜಯಪುರ ಅವಳಿ ಜಿಲ್ಲೆಗಳಲ್ಲಿ ಮಂಗಳವಾರ ಆಲಿಕಲ್ಲು ಸಮೇತ ಭಾರಿ ಗಾಳಿ-ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ.

ಕೆಲವೆಡೆ ಬಿರುಗಾಳಿ ಸಹ ಬೀಸಿದ ಪರಿಣಾಮ ಹಾನಿ ಉಂಟಾದ ವರದಿಗಳು ಕೇಳಿಬಂದಿವೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಹೊಸೂರು ಗ್ರಾಮ ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆ ದಾಖಲಾಗಿದ್ದು, ರೈತರಿಗೆ ಆತಂಕ ಮೂಡಿಸಿದೆ. ಗ್ರಾಮದ ಶ್ರೀಕಾಂತ್ ಸುಂಕದವರ ಅವರ ಹೊಲದ ವ್ಯಾಪ್ತಿಯಲ್ಲಿ ಆಲಿಕಲ್ಲು ಸುರಿದಿದ್ದು, ಬೆಳೆಗಳಿಗೆ ಹಾನಿಯಾಗಿದೆ.ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ ರೈತರು ಚಿಂತೆಗೆ ಒಳಗಾಗಿದ್ದಾರೆ.

ಇತ್ತ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಸುರಿದ ಅಕಾಲಿಕ ಆಲಿಕಲ್ಲು ಮಳೆಯಿಂದ ದ್ರಾಕ್ಷಿ ಸೇರಿದಂತೆ ರೈತರ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ.

ಸ್ಥಳೀಯ ಆಡಳಿತವು ಹಾನಿ ಪರಿಶೀಲನೆ ನಡೆಸಿ ಅಗತ್ಯ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ರೈತರು ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande