ವಿಜಯಪುರದಲ್ಲಿ 15ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ ಹೊಟೇಲ್ಗಳ ಮೇಲೆ ಆಹಾರ ಇಲಾಖೆ ದಾಳಿ
ವಿಜಯಪುರ, 17 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಹೊಟೇಲ್ಗಳಲ್ಲಿ ಅನಧಿಕೃತವಾಗಿ ಗೃಹಬಳಕೆ ಸಿಲಿಂಡರ್ ಬಳಸುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಅಧಿಕಾರಿಗಳು ಮಂಗಳವಾರ ನಗರದಲ್ಲಿ ದಾಳಿ ನಡೆಸಿ 15ಕ್ಕೂ ಹೆಚ್ಚು ಸಿಲಿಂ
ಸಿಲಿಂಡರ್


ವಿಜಯಪುರ, 17 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಹೊಟೇಲ್ಗಳಲ್ಲಿ ಅನಧಿಕೃತವಾಗಿ ಗೃಹಬಳಕೆ ಸಿಲಿಂಡರ್ ಬಳಸುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಅಧಿಕಾರಿಗಳು ಮಂಗಳವಾರ ನಗರದಲ್ಲಿ ದಾಳಿ ನಡೆಸಿ 15ಕ್ಕೂ ಹೆಚ್ಚು ಸಿಲಿಂಡರ್ಗಳನ್ನು ಜಪ್ತಿ ಮಾಡಿದ್ದಾರೆ.

ನಗರದ ಸೋಲಾಪುರ ರಸ್ತೆ ಪಕ್ಕದಲ್ಲಿರುವ ಹಲವು ಹೊಟೇಲ್ಗಳಲ್ಲಿ ಗೃಹಬಳಕೆ ಸಿಲಿಂಡರ್ಗಳನ್ನು ವಾಣಿಜ್ಯ ಬಳಕೆಗೆ ಬಳಸುತ್ತಿರುವುದು ಪತ್ತೆಯಾಗಿದ್ದು, ಅಧಿಕಾರಿಗಳು ಒಟ್ಟು 15 ಸಿಲಿಂಡರ್ಗಳನ್ನು ವಶಪಡಿಸಿಕೊಂಡರು.

ಈ ವೇಳೆ ನಿಯಮ ಉಲ್ಲಂಘಿಸಿದ ಹೊಟೇಲ್ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ. ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಹಾಯಕ ನಿರ್ದೇಶಕ ಅಮರೇಶ ತಾಂಡೂರ ಹಾಗೂ ಆಹಾರ ನಿರೀಕ್ಷಕ ವಿಜಯಕುಮಾರ್ ಗುಮಶೆಟ್ಟಿ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು.

ಇಂತಹ ಅನಧಿಕೃತ ಬಳಕೆ ವಿರುದ್ಧ ಮುಂದುವರಿದ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande