ಓದುವ ಅಭ್ಯಾಸ ರೂಢಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಲಹೆ
ರಾಯಚೂರು, 18 ಮಾರ್ಚ್ (ಹಿ.ಸ.) ಆ್ಯಂಕರ್ : ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಬಳಕೆ ಕಡಿಮೆ ಮಾಡಿ, ಉತ್ತಮವಾಗಿ ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಗಳಾದ ಹಾಲಸಿದ್ದಪ್ಪ ಪೂಜಾರಿ ಅವರು ಹೇಳಿದರು. ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ
Advice to students to develop reading habits


Advice to students to develop reading habits


ರಾಯಚೂರು, 18 ಮಾರ್ಚ್ (ಹಿ.ಸ.)

ಆ್ಯಂಕರ್ : ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಬಳಕೆ ಕಡಿಮೆ ಮಾಡಿ, ಉತ್ತಮವಾಗಿ ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಗಳಾದ ಹಾಲಸಿದ್ದಪ್ಪ ಪೂಜಾರಿ ಅವರು ಹೇಳಿದರು.

ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ 10ನೇ ತರಗತಿ, ಪಿಯುಸಿ ನಂತರ ವೃತ್ತಿ ಪ್ರಪಂಚದ ಅರಿವು ಮೂಡಿಸಲು ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ತಂದೆ- ತಾಯಿಯವರ ಕನಸುಗಳನ್ನು ಈಡೇರಿಸಬೇಕು. ವಿದ್ಯಾರ್ಥಿಗಳು ಕೌಶಲದ ಕಡೆ ಗಮನಹರಿಸಬೇಕು. ಎಐ ಬಗ್ಗೆ ವಿದ್ಯಾರ್ಥಿಗಳು ಸರಿಯಾಗಿ ತಿಳಿದುಕೊಳ್ಳಬೇಕು. ಹತ್ತನೇ ಹಾಗೂ ದ್ವಿತೀಯ ಪಿಯುಸಿ ನಂತರ ಕೋರ್ಸುಗಳ ಆಯ್ಕೆಗೆ ಈ ಮೇಳ ಸಹಕಾರಿಯಾಗಿದೆ ಎಂದರು.

ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಿದ್ದು, ವಿದ್ಯಾರ್ಥಿಗಳು ತಮ್ಮ ಆರೋಗ್ಯ ಕಡೆಗೆ ಹೆಚ್ಚಿನ ಕಾಳಜಿ ವಹಿಸಬೇಕು. ಸರಿಯಾದ ಸಮಯಕ್ಕೆ ಹೆಚ್ಚಾಗಿ ನೀರು ಕುಡಿಯಬೇಕು. ಜಿಲ್ಲಾಡಳಿತದಿಂದ ಈ ಬಗ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಅವುಗಳನ್ನು ಎಲ್ಲರೂ ಪಾಲಿಸಬೇಕು ಎಂದರು.

ಈ ವೇಳೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಡಿ.ಬಡಿಗೇರ ಅವರು ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯಗಳನ್ನು ಬೆಳೆಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದರು.

ವಿವಿಧ ಮಳಿಗೆ ಉದ್ಘಾಟನೆ: ನಗರದ ರಂಗಮಂದಿರದ ಆವರಣದಲ್ಲಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ವಿಶೇಷ ಅವಕಾಶ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಹಂತದ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ, ವಿದ್ಯಾರ್ಥಿ ವೇತನ ಮತ್ತು ಉದ್ಯೋಗಾವಕಾಶಗಳ ಬಗ್ಗೆ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ನೀಡುವ ಉದ್ದೇಶದಿಂದ ಸ್ಥಾಪಿಸಲಾಗಿದ್ದ ವಿವಿಧ ಮಳಿಗೆಗಳಿಗೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಅವರು ಚಾಲನೆ ನೀಡಿದರು.

ಮಳಿಗೆಯಲ್ಲಿ ಕೃಷಿ ವಿಶ್ವವಿದ್ಯಾಲಯ ಅಡಿಯಲ್ಲಿನ ಕೋರ್ಸ್ಗಳ ಮಾಹಿತಿ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ ಸೇರಿದಂತೆ ಇತರೆ ಸರ್ಕಾರಿ ಇಲಾಖೆಗಳಿಂದ ವಿವಿಧ ಶಿಕ್ಷಣಾವಕಾಶಗಳು, ತಾಂತ್ರಿಕ ಶಿಕ್ಷಣ, ಐಟಿಐ, ಡಿಪೆÇ್ಲೀಮಾ, ಎಂಜಿನಿಯರಿಂಗ್, ಮೆಡಿಕಲ್, ಕೌಶಲ್ಯ ತರಬೇತಿ, ಕೃಷಿ, ಕಂಪ್ಯೂಟರ್ ಕೋರ್ಸಗಳು, ವಿದ್ಯಾರ್ಥಿ ವೇತನ, ತರಬೇತಿ ಕೇಂದ್ರಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.

1,407ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ: ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳದಲ್ಲಿ ಜಿಲ್ಲೆಯ ವಿವಿಧ ಶಾಲೆಯ 1,407ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿಯನ್ನು ಮಾಡಿಕೊಳ್ಳುವ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕರಿಯರ್ ಮೇಳದ ಪೆÇೀಸ್ಟರ್ ಬಿಡುಗಡೆ ಮಾಡಲಾಯಿತು. ಕರಿಯರ್ ರಥವನ್ನು ಎಳೆಯಲಾಯಿತು.

ಇದಕ್ಕೂ ಮುಂಚೆ ದೇವದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ ಅವರಿಂದ ಭಾರತ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು.

ಇದೇ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಭಾರಿ ಉಪ ನಿರ್ದೇಶಕರಾದ ಸೋಮಶೇಖರಪ್ಪ ಹೋಕ್ರಾಣಿ, ಡಯಟ್ ಪ್ರಾಂಶುಪಾಲರು ಹಾಗೂ ಅಭಿವೃದ್ಧಿ ಉಪ ನಿರ್ದೇಶಕರಾದ ಚಂದ್ರಶೇಖರ ಭಂಡಾರಿ, ಡಯಟ್ ಹಿರಿಯ ಉಪನ್ಯಾಸಕರಾದ ಶಿವಮ್ಮ, ಶರಣಪ್ಪ ವಟಗಲ್, ಡಯಟ್ ನೋಡಲ್ ಅಧಿಕಾರಿ ಸುಖದೇವ್, ಶಿವಮಣಿ ಸೇರಿದಂತೆ ವಿವಿಧ ಶಾಲಾ ಹಾಗೂ ಕಾಲೇಜಿನ ಶಿಕ್ಷಕರು, ಉಪನ್ಯಾಸರು, ವಿದ್ಯಾರ್ಥಿಗಳು ಇದ್ದರು

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande