ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಪಕ್ಷದ ಸಂಘಟನಾ ಸಭೆ
ಬಾಗಲಕೋಟೆ, 18 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲಾ ಕಾರ್ಯಾಲಯದಲ್ಲಿ ಉಪಚುನಾವಣೆಯ ನಿಮಿತ್ತ ಪಕ್ಷದ ಪ್ರಮುಖರ ವಿಶೇಷ ಸಂಘಟನಾತ್ಮಕ ಸಭೆ ನಡೆಯಿತು. ಸಭೆಯಲ್ಲಿ ಪಕ್ಷದ ಹಿರಿಯ ಮುಖಂಡರು ಹಾಗೂ ಪದಾಧಿಕಾರಿಗಳೊಂದಿಗೆ ಮುಂಬರುವ ಉಪಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಕೈಗೊಳ್ಳಬೇಕಾದ ಕಾರ್ಯತಂತ
ಬಿಜೆಪಿ ಸಙೆ


Bjp meeting


ಬಾಗಲಕೋಟೆ, 18 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲಾ ಕಾರ್ಯಾಲಯದಲ್ಲಿ ಉಪಚುನಾವಣೆಯ ನಿಮಿತ್ತ ಪಕ್ಷದ ಪ್ರಮುಖರ ವಿಶೇಷ ಸಂಘಟನಾತ್ಮಕ ಸಭೆ ನಡೆಯಿತು.

ಸಭೆಯಲ್ಲಿ ಪಕ್ಷದ ಹಿರಿಯ ಮುಖಂಡರು ಹಾಗೂ ಪದಾಧಿಕಾರಿಗಳೊಂದಿಗೆ ಮುಂಬರುವ ಉಪಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳು, ಸಂಘಟನಾ ಬಲವರ್ಧನೆ ಹಾಗೂ ಕ್ಷೇತ್ರ ಮಟ್ಟದಲ್ಲಿ ಜನರನ್ನು ತಲುಪುವ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು.

ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸುವ ಯೋಜನೆ, ಕಾರ್ಯಕರ್ತರ ಸಂಘಟನೆಗೆ ಇನ್ನಷ್ಟು ಚೈತನ್ಯ ತುಂಬುವುದು ಮತ್ತು ಸರ್ಕಾರದ ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಕುರಿತು ಸಭೆಯಲ್ಲಿ ಒತ್ತು ನೀಡಲಾಯಿತು.

ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಕಾರ್ಯಕರ್ತರ ಉತ್ಸಾಹ ಮತ್ತು ಹಿರಿಯರ ಮಾರ್ಗದರ್ಶನವೇ ಪಕ್ಷದ ಶಕ್ತಿಯಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಉಪಚುನಾವಣೆಯಲ್ಲಿ ಪಕ್ಷದ ಗೆಲುವನ್ನು ಗುರಿಯಾಗಿಸಿಕೊಂಡು, ಕ್ಷೇತ್ರದಾದ್ಯಂತ ಸಂಘಟನಾ ಚಟುವಟಿಕೆಗಳನ್ನು ಮತ್ತಷ್ಟು ತೀವ್ರಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande