

ಬಾಗಲಕೋಟೆ, 18 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆ ಕುರಿತು ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೇಟಿ ಸಹೋದರರು ಭೇಟಿ ಆಗಿ ಟಿಕೆಟ್ ಕುರಿತು ಚರ್ಚೆ ನಡೆಸಿದ್ದಾರೆ.
ಏತನ್ಮಧ್ಯೆ, ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಕಳೆದೊಂದು ವಾರದಿಂದ ತೆರೆ ಮರೆಯಲ್ಲಿ ಟಿಕೆಟ್ ಗೆ ಒತ್ತಡ ಹಾಕುತ್ತಿದ್ದ ಮಾಜಿ ಜಿ.ಪಂ ಅಧ್ಯಕ್ಷೆ ವೀಣಾ ವಿಜಯಾನಂದ ಕಾಶಪ್ಪನವರ ಇದೀಗ ಬಹಿರಂಗವಾಗಿ ನಾನು ಪ್ರಬಲ ಆಕಾಂಕ್ಷಿಯಾಗಿದ್ದೆನೆಂದು ಮಾಧ್ಯಮಗಳ ಬಳಿ ಹೇಳಿಕೊಂಡಿದ್ದಾರೆ.
ಕ್ಷೇತ್ರದಲ್ಲಿ ಮೇಟಿ ಕುಟುಂಬದ ಹೆಸರೇ ಪ್ರಮುಖವಾಗಿ ಚರ್ಚೆಯಲ್ಲಿದ್ದರೂ, ಕುಟುಂಬದ ಹೊರತಾಗಿ ಟಿಕೆಟ್ ನೀಡುವ ಸಾಧ್ಯತೆ ಎದುರಾದರೆ ಆಗ ನನಗೆ ಟಿಕೆಟ್ ನೀಡಬೇಕು ಎಂದು ಅವರು ಪಕ್ಷದ ವರಿಷ್ಠರು ಮಲೆ ಒತ್ತಡ ಹೇರಿದ್ದಾರೆ. ಮೇಟಿ ಸಹೋದರರ ಪೈಪೋಟಿ ಹೆಚ್ಚಾಗಿ ಬೇರೆ ಅಭ್ಯರ್ಥಿಗೆ ಟಿಕೆಟ್ ಕೊಡುವ ನಿಲುವು ತಾಳಿದರೆ ವೀಣಾ ಕಾಶಪ್ಪನವರ ಅವರಿಗೆ ಸಿಗಬಹುದು ಎಂದು ಸ್ಥಳೀಯ ಕಾಂಗ್ರೆಸ್ ಪ್ರಮುಖರು ಹಿಂದುಸ್ತಾನ್ ಸಮಾಚಾರ ಸುದ್ದಿ ಸಂಸ್ಥೆೆ ಪ್ರತಿನಿಧಿ ಬಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಈಗಾಗಲೇ ಮಾಧ್ಯಮಗಳಿಗೆ ಸ್ಪಷ್ಟ ಪಡಿಸಿರುವ ವೀಣಾ ಕಾಶೇಪ್ಪನವರ್, ಜಿಲ್ಲಾ ಪಂಚಾಯತ ಅಧ್ಯಾಕ್ಷೆಯಾಗಿ ಸೇವೆ ಸಲ್ಲಿಸಿದ್ದೆನೆ. ಕಳೆದ ಲೋಕಸಭಾ ಚುನಾವಣೆಯಲ್ಲಿಯೂ ಟಿಕೆಟ್ ಕೊಡುವುದಾಗಿ ಹೇಳಿ ಕೊನೆ ಘಳಿಗೆಯಲ್ಲಿ ಬೇರೆಯವರಿಗೆ ನೀಡಲಾಗಿತ್ತು. ಹಾಗಾಗಿ ಮೇಟಿ ಕುಟುಂಬ ಹೊರತು ಪಡೆಸಿದರೆ ನನಗೆ ಟಿಕೆಟ್ ಕೊಡಬೇಕೆಂದು ಪಟ್ಟು ಹಿಡಿದಿದ್ದಾರೆ.
ಇದರಿಂದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಇನ್ನಷ್ಟು ಕುತೂಹಲ ಕೆರಳಿಸಿದೆ. ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಹಲವು ಹೆಸರುಗಳು ಓಡಾಡುತ್ತಿದ್ದು, ಅಂತಿಮವಾಗಿ ಪಕ್ಷದ ಹೈಕಮಾಂಡ್ ಯಾರಿಗೆ ಅವಕಾಶ ನೀಡಲಿದೆ ಎಂಬುದು ಕಾದು ನೋಡುವಂತಾಗಿದೆ. ಆದರೆ ಅಭ್ಯರ್ಥಿ ಯಾರೇ ಆಗಲಿ, ಬಾಗಲಕೋಟೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ಪಕ್ಷದ ಕಾರ್ಯಕರ್ತರಲ್ಲಿದೆ.
ಇದೇ ವೇಳೆ, ಕ್ಷೇತ್ರದ ರಾಜಕೀಯ ಬೆಳವಣಿಗೆಗಳು ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಕಾಂಗ್ರೆಸ್ ಟಿಕೆಟ್ ಘೋಷಣೆ ನಂತರವೇ ಸ್ಥಳೀಯ ರಾಜಕೀಯ ಚಿತ್ರಣ ಇನ್ನಷ್ಟು ಸ್ಪಷ್ಟವಾಗಲಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande