

ಬಾಗಲಕೋಟೆ, 18 ಮಾರ್ಚ್ (ಹಿ.ಸ.):
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆ ಪೊಲೀಸ್ ಕಾರ್ಯಾಲಯದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ, ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಸೂಕ್ತ ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಪಚುನಾವಣೆಯನ್ನು ಶಾಂತಿಯುತ, ಪಾರದರ್ಶಕ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ರೀತಿಯಲ್ಲಿ ನಡೆಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಯಿತು.
ಭದ್ರತಾ ವ್ಯವಸ್ಥೆ, ಸೂಕ್ಷ್ಮ ಪ್ರದೇಶಗಳ ಮೇಲ್ವಿಚಾರಣೆ, ಬಂದೋಬಸ್ತ್ ವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ವಿಷಯಗಳಿಗೆ ವಿಶೇಷ ಒತ್ತು ನೀಡಲಾಯಿತು.
ಚುನಾವಣಾ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕಾನೂನು ಸುವ್ಯವಸ್ಥೆ ಹದಗೆಡದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಭೆಯಲ್ಲಿ ಸೂಚಿಸಿದರು.
ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಿತ ಸಿಬ್ಬಂದಿ ಸಭೆಯಲ್ಲಿ ಉಪಸ್ಥಿತರಿದ್ದರು
---------------
ಹಿಂದೂಸ್ತಾನ್ ಸಮಾಚಾರ್ / jyothi deshpande