
ಬಾಗಲಕೋಟೆ, 18 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ರಾಜಕೀಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈಗ ಉತ್ತರ ಕರ್ನಾಟಕ ರೈತ ಸಂಘವೂ ಅಖಾಡಕ್ಕಿಳಿದಿದೆ.
ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳಿಗೆ ಸವಾಲೊಡ್ಡುವ ನಿಟ್ಟಿನಲ್ಲಿ ರೈತ ಸಂಘ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದೆ.
ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಜಕಾತಿ ಅವರು ಸಂಘಟನೆಯ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದ್ದು,
ಮಾರ್ಚ್ 20ರಂದು ಸಾವಿರಾರು ರೈತರ ಸಮ್ಮುಖದಲ್ಲಿ ಅವರು ಬೃಹತ್ ಶಕ್ತಿ ಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಉತ್ತರ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಬಸವರಾಜ್ ಕರಿಗಾರ ಬರುವ ತಾಲೂಕು ಪಂಚಾಯತ ಹಾಗೂ ಜಿಲ್ಲಾ ಪಂಚಾಯತ ಚುನಾವಣೆಗಳಲ್ಲಿ ರೈತ ಸಂಘ ಸರ್ಧೆ ಮಾಡಲಿದೆ ಎಂದು ಹೇಳಿದ್ದರು. ಇದೀಗ ಬಾಗಲಕೋಟೆ ಉಪಚುನಾವಣೆಯಲ್ಲಿ ಅಭ್ಯರ್ಥಿ ಘೋಷಿಸಿದ್ದು ತುರುಸಿನ ಪೈಪೋಟಿ ಏರ್ಪಡುವ ಲಕ್ಷಣ ಕಾಣುತ್ತಿದೆ.
ರಾಷ್ಟ್ರೀಯ ಪಕ್ಷಗಳಿಂದ ರೈತ ವರ್ಗ ನಿರಂತರವಾಗಿ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದೆ. ರೈತರ ಧ್ವನಿಯನ್ನು ವಿಧಾನಸಭೆಯಲ್ಲಿ ಪ್ರತಿಧ್ವನಿಸಲು ರೈತ ಸಂಘಟನೆ ನೇರವಾಗಿ ಚುನಾವಣಾ ಕಣಕ್ಕಿಳಿಯುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ.
ರೈತ ಸಂಘದ ಸ್ಪರ್ಧೆಯಿಂದ ಬಾಗಲಕೋಟೆ ಉಪಚುನಾವಣೆಯಲ್ಲಿ ಹೊಸ ರಾಜಕೀಯ ಲೆಕ್ಕಾಚಾರ ಆರಂಭವಾಗಿದ್ದು, ರೈತ ಮತಗಳ ಧ್ರುವೀಕರಣವಾದರೆ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳಿಗೆ ತಲೆನೋವು ಹೆಚ್ಚುವ ಸಾಧ್ಯತೆಯಿದೆ ಎಂಬ ಚರ್ಚೆ ಕ್ಷೇತ್ರದಲ್ಲಿ ಜೋರಾಗಿದೆ ಕೇಳಿ ಬರುತ್ತಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande