
ಬಾಗಲಕೋಟೆ, 18 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಪ್ರಭಾವಿ ಮುಖಂಡರಾದ ಬಸವರಾಜ ಕಟಗೇರಿ ಅವರು ಇಂದು ಅಧಿಕೃತವಾಗಿ ಮರಳಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಕ್ಷೇತ್ರದ ಬಿಜೆಪಿ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿಸಿದೆ ಎಂದು ಸಂಸದ ಗೋವಿಂದ ಕಾರಜೋಳ್ ತಿಳಿಸಿದರು.
ಜಿಲ್ಲಾ ಪಕ್ಷದ ಕಾರ್ಯಾಲಯದಲ್ಲಿ ಮರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಬವರಾಜ್ ಕಟಗೇರಿ,
ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಪರ ನಿಲುವು ಹಾಗೂ ಪಕ್ಷದ ಸಿದ್ಧಾಂತಗಳನ್ನು ಮೆಚ್ಚಿ ನಾನು ಹಾಗೂ ನನ್ನ ಅಪಾರ ಬೆಂಬಲಿಗರು ಮತ್ತೆ ಪಕ್ಷ ಸೇರ್ಪಡೆಯಾಗಿದ್ದೆವೆ ಎಂದು ಹೇಳಿದರು.
ಕಟಗೇರಿ ಅವರ ಮರಳುವಿಕೆಯಿಂದ ಬಾಗಲಕೋಟೆ ಭಾಗದಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ಬಂದಿದ್ದು, ಮುಂಬರುವ ರಾಜಕೀಯ ಬೆಳವಣಿಗೆಗಳ ದೃಷ್ಟಿಯಿಂದ ಇದೊಂದು ಮಹತ್ವದ ಹೆಜ್ಜೆ ಎಂದು ಪರಿಗಣಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಮಾತನಾಡಿದ
ಕಾರಜೋಳ್, ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಇನ್ನಷ್ಟು ಸಂಘಟಿತವಾಗಿ ಬೆಳೆಯಲಿದ್ದು, ಎಲ್ಲ ಕಾರ್ಯಕರ್ತರೂ ಒಗ್ಗೂಡಿ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ರಾಜ್ಯ ಬಿಜೆಪಿ ಕಾರ್ಯದರ್ಶಿ ಶರಣು ತಳ್ಳಿಕೇರಿ, ಬೆಳಗಾವಿ ವಿಭಾಗದ ಸಹ ಪ್ರಭಾರಿ ಬಸವರಾಜ್ ಯಂಕಂಚಿ ಸೇರಿದಂತೆ ಪಕ್ಷದ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande