
ಗದಗ, 18 ಮಾರ್ಚ್ (ಹಿ.ಸ.)
ಆ್ಯಂಕರ್:
ಗದಗ ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ-2031 ರ ವರದಿ ತಯಾರಿಕೆಗೆ ಜಿಲ್ಲಾ ಮಟ್ಟದ ವಲಯವಾರು ಉಪಸಮಿತಿಗಳ ಸಮಿತಿ ಸಭೆಯು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾದಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್.ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್.ಶ್ರೀಧರ್ ಅವರು ಮಾತನಾಡಿ ಜಿಲ್ಲಾ ಮಾನವ ಅಭಿವೃದ್ಧಿ ವರದಿಯು ಸಮಗ್ರ ಅಭಿವೃದ್ಧಿ ಮತ್ತು ಜನರ ಜೀವನಮಟ್ಟ ಸುಧಾರಣೆಗೆ ಸಹಕಾರಿಯಾಗಲಿದೆ. ಮಾನವ ಅಭಿವೃದ್ಧಿ ವರದಿಯು ಇಡೀ ಜಿಲ್ಲೆಯ ಸಾರ್ವಜನಿಕರ ಅಭಿವೃದ್ಧಿಯ ಕುರಿತಂತೆ ಅಂಕಿ ಅಂಶಗಳು ಮತ್ತು ಜಿಲ್ಲೆಯಲ್ಲಿನ ಜನರ ಜೀವನ ಸ್ಥಿತಿ ಮತ್ತು ಅದನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವ ಉದ್ದೇಶವನ್ನು ಹೊಂದಿದೆ. ಇದರಿಂದ ಹೊಸ ಯೋಜನೆಗಳ ಅನುಷ್ಟಾನ ಮಾಡಲು ಸಹ ಅನುಕೂಲವಾಗುತ್ತದೆ. ಜಿಲ್ಲೆಯ 2031 ರಲ್ಲಿ ಸುಸ್ಥಿರ ಅಭಿವೃದ್ಧಿ ಯೋಜನೆ ಕುರಿತಂತೆ ತಮ್ಮ ಇಲಾಖಾ ವ್ಯಾಪ್ತಿಯ ಮಾಹಿತಿಯನ್ನು ಜಿಲ್ಲಾ ಪಂಚಾಯತ್ಗೆ ಸಲ್ಲಿಸಬೇಕು ಎಂದರು.
ಜಿ.ಪಂ ಮುಖ್ಯ ಯೋಜನಾಧಿಕಾರಿ ಎ.ಎ.ಕಂಬಾಳಿಮಠ ಸರ್ವರನ್ನು ಸ್ವಾಗತಿಸಿ ಸುಸ್ಥಿರ ಅಭಿವೃದ್ಧಿ ಯೋಜನೆ ವರದಿ ತಯಾರಿಕೆಗೆ ಜಿಲ್ಲಾ ಮಟ್ಟದ ಉಪಸಮಿತಿಗಳು ತಮ್ಮ ಇಲಾಖೆಯ ಮಾಹಿತಿಯನ್ನು ಸಲ್ಲಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ರೀಮತಿ ಪದ್ಮಾವತಿ ಜಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP