ಜಿಬಿಎ ಮತಪಟ್ಟಿ ಆಕ್ಷೇಪಣೆ ಅವಧಿ ವಿಸ್ತರಣೆಗಾಗಿ ಬಿಜೆಪಿ ಮನವಿ
ಬೆಂಗಳೂರು, 18 ಮಾರ್ಚ್ (ಹಿ.ಸ.): ಆ್ಯಂಕರ್: ಜಿಬಿಎ ಚುನಾವಣೆಯ ಕರಡು ಮತಪಟ್ಟಿ ಪರಿಶೀಲನೆಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಿರುವ ಅವಧಿಯನ್ನು ವಿಸ್ತರಿಸಬೇಕೆಂದು ಬಿಜೆಪಿ ನಿಯೋಗವು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಮತಪಟ್ಟಿಯ ಪರಿಶೀಲನೆಗೆ ಸಮರ್ಪಕ ಸಮಯ ದೊರ
Bjp


ಬೆಂಗಳೂರು, 18 ಮಾರ್ಚ್ (ಹಿ.ಸ.):

ಆ್ಯಂಕರ್:

ಜಿಬಿಎ ಚುನಾವಣೆಯ ಕರಡು ಮತಪಟ್ಟಿ ಪರಿಶೀಲನೆಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಿರುವ ಅವಧಿಯನ್ನು ವಿಸ್ತರಿಸಬೇಕೆಂದು ಬಿಜೆಪಿ ನಿಯೋಗವು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಮತಪಟ್ಟಿಯ ಪರಿಶೀಲನೆಗೆ ಸಮರ್ಪಕ ಸಮಯ ದೊರೆಯದೇ ಇರುವುದರಿಂದ ಮತದಾರರಿಗೆ ತೊಂದರೆ ಉಂಟಾಗುತ್ತಿದೆ ಎಂದು ನಿಯೋಗವು ತನ್ನ ಮನವಿಯಲ್ಲಿ ಉಲ್ಲೇಖಿಸಿದೆ. ಹೀಗಾಗಿ, ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಆಕ್ಷೇಪಣೆ ಸಲ್ಲಿಸುವ ಗಡುವನ್ನು ವಿಸ್ತರಿಸುವುದು ಅಗತ್ಯವಿದೆ ಎಂದು ತಿಳಿಸಿದೆ.

ಈ ಸಂದರ್ಭದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ , ಬಿಜೆಪಿ ಹಿರಿಯ ನಾಯಕರು ಹಾಗೂ ಶಾಸಕರಾದ ಎಸ್. ಸುರೇಶ್ ಕುಮಾರ್ ಸೇರಿದಂತೆ ಇತರ ಪ್ರಮುಖರು ನಿಯೋಗದಲ್ಲಿ ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande