ಮುದ್ದೇಬಿಹಾಳದಲ್ಲಿ ಆಲಿಕಲ್ಲು ಮಳೆ : ಬೆಳೆ ಹಾನಿ ಪರಿಹಾರಕ್ಕೆ ರೈತರ ಆಗ್ರಹ
ವಿಜಯಪುರ, 18 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ನಿನ್ನೆ ಸುರಿದ ಅಕಾಲಿಕ ಆಲಿಕಲ್ಲು ಮಳೆಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾಗೂ ಮನೆಗಳು ಹಾನಿಗೊಳಗಾಗಿವೆ. ಬಿದರಕುಂದಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಿನ್ನೆ ಮಧ್ಯಾಹ್ನ ಏಕಾಏಕಿ ಸುರಿದ ಆಲಿಕಲ್ಲು
ಹಾನಿ


ವಿಜಯಪುರ, 18 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ನಿನ್ನೆ ಸುರಿದ ಅಕಾಲಿಕ ಆಲಿಕಲ್ಲು ಮಳೆಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾಗೂ ಮನೆಗಳು ಹಾನಿಗೊಳಗಾಗಿವೆ.

ಬಿದರಕುಂದಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಿನ್ನೆ ಮಧ್ಯಾಹ್ನ ಏಕಾಏಕಿ ಸುರಿದ ಆಲಿಕಲ್ಲು ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಗಾಳಿ ಸಹಿತ ಆರಂಭವಾದ ಮಳೆ ಸತತವಾಗಿ ಸುರಿದಿದ್ದರಿಂದ ಅಪಾರ ಹಾನಿ ಆಗಿದೆ. ದೊಡ್ಡ ಗಾತ್ರದ ಆಲೆಕಲ್ಲುಗಳು ಮನೆಗಳ ಮೇಲ್ಛಾವಣಿ, ವಾಹನಗಳು ಹಾಗೂ ಕೃಷಿ ಬೆಳೆಗಳಿಗೆ ಹಾನಿ ಉಂಟು ಮಾಡಿವೆ.

ಹತ್ತಿ, ಜೋಳ, ಗೋದಿ ಸೇರಿದಂತೆ ವಿವಿಧ ಬೆಳೆಗಳು ಹಾನಿಗೊಳಗಾಗಿವೆ ಎಂದು ರೈತರು ಕಳವಳ ವ್ಯಕ್ತಪಡಿಸಿದ್ದಾರೆ. ರಸ್ತೆಗಳ ಮೇಲೆ ಆಲೆಕಲ್ಲುಗಳು ಜಮಾಯಿಸಿಕೊಂಡ ಪರಿಣಾಮ ವಾಹನ ಸಂಚಾರದಲ್ಲಿ ತೀವ್ರ ಅಡಚಣೆ ಉಂಟಾಗಿತ್ತು, ಕೆಲ ಕಾಲ ವಾಹನಗಳು ನಿಂತು ಹೋಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೆಲವೆಡೆ ದ್ವಿಚಕ್ರ ವಾಹನ ಸವಾರರು ಬಿದ್ದ ಗಾಯಗೊಂಡ ಘಟನೆಗಳು ವರದಿಯಾಗಿವೆ.

ಮರಗಳು ಉರುಳಿ ಬಿದ್ದ ಪರಿಣಾಮ ಕೆಲವು ಗ್ರಾಮಗಳಲ್ಲಿ ವಿದ್ಯುತ್ ತಂತಿಗಳು ಕಡಿದು, ವಿದ್ಯುತ್ ಸರಬರಾಜು ಸ್ಥಗಿತಗೊಂಡಿತು. ಹಾನಿ ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಪರಿಹಾರ ಘೋಷಿಸಬೇಕೆಂದು ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande