ಮುನಿರಾಬಾದ್: ಮಾರ್ಚ್ 23ಕ್ಕೆ ವಿದ್ಯುತ್ ಗ್ರಾಹಕರ ಸಭೆ
ಮುನಿರಾಬಾದ್ , 18 ಮಾರ್ಚ್ (ಹಿ.ಸ.): ಆ್ಯಂಕರ್ : ಜೆಸ್ಕಾಂ ಮುನಿರಾಬಾದ್ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸುವ ಉದ್ದೇಶದಿಂದ ಮಾರ್ಚ್ 23 ರಂದು ಬೆಳಿಗ್ಗೆ 11 ಗಂಟೆಗೆ ಮುನಿರಾಬಾದ್ ಜೆಸ್ಕಾಂ ಕಚೇರಿ ಆವರಣದಲ್ಲಿ ವಿದ್ಯುತ್ ಗ್ರಾಹಕರ
ಮುನಿರಾಬಾದ್: ಮಾರ್ಚ್ 23ಕ್ಕೆ ವಿದ್ಯುತ್ ಗ್ರಾಹಕರ ಸಭೆ


ಮುನಿರಾಬಾದ್ , 18 ಮಾರ್ಚ್ (ಹಿ.ಸ.):

ಆ್ಯಂಕರ್ : ಜೆಸ್ಕಾಂ ಮುನಿರಾಬಾದ್

ಕಾರ್ಯ ಮತ್ತು ಪಾಲನಾ ಉಪ ವಿಭಾಗದ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸುವ ಉದ್ದೇಶದಿಂದ ಮಾರ್ಚ್ 23 ರಂದು ಬೆಳಿಗ್ಗೆ 11 ಗಂಟೆಗೆ ಮುನಿರಾಬಾದ್ ಜೆಸ್ಕಾಂ ಕಚೇರಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಜೆಸ್ಕಾಂ ಮುನಿರಾಬಾದ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಹಿನ್ನೆಲೆಯಲ್ಲಿ ಸೋಮವಾರದಂದು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅಂದು ಮುನಿರಾಬಾದ್ ಜೆಸ್ಕಾಂ ಉಪವಿಭಾಗದ ವ್ಯಾಪ್ತಿಯ ಮುನಿರಾಬಾದ್, ಹುಲಿಗಿ, ಹಿಟ್ನಾಳ, ಅಗಳಕೇರಾ, ಶಿವಪುರ, ಗಿಣಿಗೇರಾ, ಹಿರೇಬಗನಾಳ, ಕುಣಿಕೇರಾ, ಕಲ್ತಾವರಗೇರಾ, ಬಂಡಿಹರ್ಲಾಪುರ, ಬೂದುಗುಂಪಾ, ಗುಳದಳ್ಳಿ, ಬೇವಿನಹಳ್ಳಿ, ಇಂದರಗಿ, ಹೊಸಳ್ಳಿ, ವನಬಳ್ಳಾರಿ ಗ್ರಾಮ ಪಂಚಾಯತಿಗಳ ಎಲ್ಲಾ ವಿದ್ಯುತ್ ಗ್ರಾಹಕರು ಈ ಸಭೆಗೆ ಹಾಜರಾಗಿ ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande