ಅಸ್ಸಾಂ ಜನತೆ ಬದಲಾವಣೆ ಬಯಸಿದ್ದಾರೆ: ಡಿ.ಕೆ. ಶಿವಕುಮಾರ್
ನವದೆಹಲಿ, 18 ಮಾರ್ಚ್ (ಹಿ.ಸ.): ಆ್ಯಂಕರ್: ಅಸ್ಸಾಂ ಕಾಂಗ್ರೆಸ್‌ನ ಸಂಸದರು ಬಿಜೆಪಿ ಸೇರ್ಪಡೆಗೊಂಡ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅಸ್ಸಾಂ ಚುನಾವಣಾ ಉಸ್ತುವಾರಿ, ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಕ್ಷದ ನಿಷ್ಠಾವಂತ ನಾಯಕ ಹೊರನಡೆದಿರುವುದು ಅಚ್ಚರಿಯ ಸಂಗತಿಯಾಗಿದೆ ಎಂದು ಹೇಳಿದ್ದಾರ
Dks


ನವದೆಹಲಿ, 18 ಮಾರ್ಚ್ (ಹಿ.ಸ.):

ಆ್ಯಂಕರ್:

ಅಸ್ಸಾಂ ಕಾಂಗ್ರೆಸ್‌ನ ಸಂಸದರು ಬಿಜೆಪಿ ಸೇರ್ಪಡೆಗೊಂಡ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅಸ್ಸಾಂ ಚುನಾವಣಾ ಉಸ್ತುವಾರಿ, ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪಕ್ಷದ ನಿಷ್ಠಾವಂತ ನಾಯಕ ಹೊರನಡೆದಿರುವುದು ಅಚ್ಚರಿಯ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ ಪಕ್ಷ ತೊರೆದಿರುವುದು ನಮಗೆ ಅಚ್ಚರಿ ತಂದಿದೆ. ನಾನು ಅವರ ಜತೆ ಮಾತನಾಡುವ ಪ್ರಯತ್ನ ಮಾಡಿದೆ. ಆದರೆ ಅಷ್ಟು ಹೊತ್ತಿಗೆ ಅವರು ತೀರ್ಮಾನ ಮಾಡಿದ್ದರು. ನಾವು ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಅವರು ಕಾಂಗ್ರೆಸ್ ಪಕ್ಷದಲ್ಲಿ ರೋಲ್ ಮಾಡೆಲ್ ಆಗಿದ್ದರು” ಎಂದು ತಿಳಿಸಿದ್ದಾರೆ.

ಕಳೆದ ಒಂದು ತಿಂಗಳಲ್ಲಿ ಇದೇ ರೀತಿಯ ಘಟನೆ ಎರಡನೇ ಬಾರಿ ನಡೆಯುತ್ತಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಇಚ್ಛಿಸದ ಅವರು, “ಹಾಲಿ ಶಾಸಕರು ಮತ್ತು ಹಿರಿಯ ನಾಯಕರು ಪಕ್ಷ ತೊರೆದಿರುವುದು ಪಕ್ಷಕ್ಕೆ ನಷ್ಟ. ಅಸ್ಸಾಂನಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದ್ದು, ಇದರ ಪರಿಣಾಮ ಎಷ್ಟರ ಮಟ್ಟಿಗೆ ಇರುತ್ತದೆ ಎಂಬುದು ತಿಳಿದಿದೆ. ಆದರೆ ಅಸ್ಸಾಂ ಜನರು ಬದಲಾವಣೆ ಬಯಸಿದ್ದಾರೆ” ಎಂದು ಹೇಳಿದ್ದಾರೆ.

ಈ ಕುರಿತು ನವದೆಹಲಿಯ ಇಂದಿರಾ ಭವನದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಮುಂದಿನ ಚುನಾವಣಾ ಕಾರ್ಯ ತಂತ್ರಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande