ಸಮಾಜ ಕಲ್ಯಾಣ ಇಲಾಖೆ : ಮಾ. 23ರಂದು ಪೂರ್ವಭಾವಿ ಸಭೆ
ಕೊಪ್ಪಳ , 18 ಮಾರ್ಚ್ (ಹಿ.ಸ.): ಆ್ಯಂಕರ್ : 2026-27ನೇ ಸಾಲಿನಲಿ ಏಪ್ರಿಲ್ 5 ರಂದು ಡಾ.ಬಾಬು ಜಗಜೀವನ್ ರಾಂ ಅವರ 119ನೇ ಜನ್ಮ ದಿನಾಚರಣೆ ಮತ್ತು ಏಪ್ರಿಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಕುರಿತು ಚರ್ಚಿಸಲು ಮಾರ್ಚ್ 23 ರಂದು ಬೆಳಿಗ್ಗ
ಸಮಾಜ ಕಲ್ಯಾಣ ಇಲಾಖೆ : ಮಾ. 23ರಂದು ಪೂರ್ವಭಾವಿ ಸಭೆ


ಕೊಪ್ಪಳ , 18 ಮಾರ್ಚ್ (ಹಿ.ಸ.):

ಆ್ಯಂಕರ್ : 2026-27ನೇ ಸಾಲಿನಲಿ ಏಪ್ರಿಲ್ 5 ರಂದು ಡಾ.ಬಾಬು ಜಗಜೀವನ್ ರಾಂ ಅವರ 119ನೇ ಜನ್ಮ ದಿನಾಚರಣೆ ಮತ್ತು ಏಪ್ರಿಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಕುರಿತು ಚರ್ಚಿಸಲು ಮಾರ್ಚ್ 23 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.

ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಅವರು ವಹಿಸಿಕೊಳ್ಳುವರು. ಆದ್ದರಿಂದ ಸಭೆಗೆ ಜನಪ್ರತಿನಿಧಿಗಳು, ಜಿಲ್ಲೆಯ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಕೊಪ್ಪಳ ತಾಲೂಕಿನ ತಾಲೂಕು ಮಟ್ಟದ ಅಧಿಕಾರಿಗಳು. ವಿವಿಧ ಸಂಘ-ಸಂಸ್ಥೆಗಳ ಮುಖಂಡರುಗಳು ಹಾಗೂ ಸಾರ್ವಜನಿಕರು ಹಾಜರಾಗಿ ತಮ್ಮ ಅಗತ್ಯ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಅಜ್ಜಪ್ಪ ಸೂಗಲದ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande