ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಜವಾಬ್ದಾರಿ ಅಗತ್ಯ
ಬಾಗಲಕೋಟೆ, 18 ಮಾರ್ಚ್ (ಹಿ.ಸ.) ಆ್ಯಂಕರ್ : ಸಾಮಾಜಿಕ ಜಾಲತಾಣಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ, ಅವುಗಳನ್ನು ಜವಾಬ್ದಾರಿಯಿಂದ ಬಳಸುವುದು ಅತ್ಯಂತ ಅಗತ್ಯವಾಗಿದೆ ಎಂದು ಬಾಗಲಕೋಟೆ ಪೊಲೀಸ್ ಇಲಾಖೆ ಪ್ರಕಟಣೆ ಮೂಲಕ ಮನವಿ ಮಾಡಿದೆ. ಬಾಗಲಕೋಟೆ ಉಪ ಚುನಾವಣೆ ಹಿನ್ನೆಲೆಯಲ್ಲಿ ತಪ್ಪು ಮ
So Vijayapur


ಬಾಗಲಕೋಟೆ, 18 ಮಾರ್ಚ್ (ಹಿ.ಸ.)

ಆ್ಯಂಕರ್ : ಸಾಮಾಜಿಕ ಜಾಲತಾಣಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ, ಅವುಗಳನ್ನು ಜವಾಬ್ದಾರಿಯಿಂದ ಬಳಸುವುದು ಅತ್ಯಂತ ಅಗತ್ಯವಾಗಿದೆ ಎಂದು ಬಾಗಲಕೋಟೆ ಪೊಲೀಸ್ ಇಲಾಖೆ ಪ್ರಕಟಣೆ ಮೂಲಕ ಮನವಿ ಮಾಡಿದೆ.

ಬಾಗಲಕೋಟೆ ಉಪ ಚುನಾವಣೆ ಹಿನ್ನೆಲೆಯಲ್ಲಿ ತಪ್ಪು ಮಾಹಿತಿ, ದ್ವೇಷಭರಿತ ಮಾತುಗಳು ಹಾಗೂ ಅಸಭ್ಯ ಪೋಸ್ಟ್ಗಳು ಸಮಾಜದ ಶಾಂತಿ, ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಸಾಧ್ಯತೆ ಇರುವುದರಿಂದ ನಾಗರಿಕರು ಎಚ್ಚರಿಕೆಯಿಂದ ವರ್ತಿಸಬೇಕು ಎಂದು ತಿಳಿಸಲಾಗಿದೆ.

ಧರ್ಮದ ವಿರುದ್ಧದ ಅಥವಾ ದ್ವೇಷ ಹುಟ್ಟಿಸುವ ವಿಷಯಗಳು, ವೈಯಕ್ತಿಕ ನಿಂದನೆ ಮತ್ತು ಅವಹೇಳನಕಾರಿ ಪೋಸ್ಟ್ಗಳು, ಪ್ರಚೋದನಾತ್ಮಕ ಸಂದೇಶಗಳು ಅಥವಾ ವೀಡಿಯೊಗಳು, ಸುಳ್ಳು ಸುದ್ದಿ ಹಾಗೂ ಪರಿಶೀಲಿಸದ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು ಎಂದು ಸೂಚಿಸಲಾಗಿದೆ.

ಸಾಮಾಜಿಕ ಸಾಮರಸ್ಯ ಕಾಪಾಡುವುದು ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದ್ದು, ಜಾಲತಾಣಗಳನ್ನು ಸದ್ವಿನಿಯೋಗಪಡಿಸಿಕೊಂಡು ಜವಾಬ್ದಾರಿಯುತ ನಡವಳಿಕೆ ತಾಳಬೇಕು ಎಂದು ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande