ಮಾ. 20 ರಿಂದ 30 ರವರೆಗೆ ಕರವಸೂಲಾತಿ ಅಭಿಯಾನ
ಕೊಪ್ಪಳ , 18 ಮಾರ್ಚ್ (ಹಿ.ಸ.): ಆ್ಯಂಕರ್ : ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಾರ್ಚ್ 20 ರಿಂದ 30 ರವರೆಗೆ ಕರವಸೂಲಾತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ತಿಳಿಸಿದ್ದಾರೆ
ಮಾ. 20 ರಿಂದ 30 ರವರೆಗೆ ಕರವಸೂಲಾತಿ ಅಭಿಯಾನ


ಕೊಪ್ಪಳ , 18 ಮಾರ್ಚ್ (ಹಿ.ಸ.):

ಆ್ಯಂಕರ್ : ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಾರ್ಚ್ 20 ರಿಂದ 30 ರವರೆಗೆ ಕರವಸೂಲಾತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ತಿಳಿಸಿದ್ದಾರೆ.

ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಾ. 20 ರಿಂದ 30 ರವರೆಗೆ ಬೆಳಿಗ್ಗೆ 8 ರಿಂದ ಸಾಯಂಕಾಲ 6 ಗಂಟೆಯವರೆಗೆ ಕರವಸೂಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ತೆರಿಗೆ ವಸೂಲಾತಿಯಲ್ಲಿ ಶೇ. 100ರಷ್ಟು ಪ್ರಗತಿಯನ್ನು ಸಾಧಿಸುವ ಗುರಿ ಹೊಂದಲಾಗಿದೆ.

ಆದ್ದರಿಂದ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ನಿಗದಿತ ದಿನಾಂಕಗಳಂದು ಕಡ್ಡಾಯವಾಗಿ ಕರವಸೂಲಿ ಅಭಿಯಾನವನ್ನು ಕೈಗೊಳ್ಳಬೇಕು. ಪ್ರತಿ ಗ್ರಾಮ ಪಂಚಾಯತಿಯು ಈ ಅಭಿಯಾನದ ಸಮಯದಲ್ಲಿ ಗರಿಷ್ಠ ಪ್ರಮಾಣದ ಕರವಸೂಲಾತಿಯ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು.

ಕರವಸೂಲಾತಿ ಆಂದೋಲನದ ಬಗ್ಗೆ ಪ್ರತಿ ಗ್ರಾಮದಲ್ಲಿ ಬ್ಯಾನರ್ ಅಳಡಿಸಿ ಪ್ರಚಾರ ಮಾಡಬೇಕು. ಗ್ರಾಮ ಪಂಚಾಯತಿಯಲ್ಲಿ ಬಾಕಿದಾರರ ಪಟ್ಟಿಯನ್ನು ತಯಾರಿಸಿ ಮನೆ ಮನೆಗೆ ಭೇಟಿ ನೀಡಿ ಕರ ವಸೂಲಾತಿಗೆ ಕ್ರಮ ಕೈಗೊಂಡು ಶೇ.100 ರಷ್ಟು ಪ್ರಗತಿಯನ್ನು ಸಾಧಿಸಬೇಕು. ತೆರಿಗೆ ಸಂಗ್ರಹಣೆ ಮಾಡುವ ಪೂರ್ವದಲ್ಲಿ ಸ್ವಚ್ಚ ವಾಹಿನಿ ವಾಹನಗಳಲ್ಲಿ ಜಿಂಗಲ್ಸ್ ಮುಖಾಂತರ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು.

ಪ್ರತಿ 2 ಗಂಟೆಗೊಮ್ಮೆ ಗ್ರಾಮ ಪಂಚಾಯತಿಯಿಂದ ಕರವಸೂಲಾತಿ ಮಾಹಿತಿಯನ್ನು ತಾಲೂಕು ಪಂಚಾಯತಿಯ ವಿಷಯ ನಿರ್ವಾಹಕರು ಸಂಗ್ರಹಿಸಿಕೊಂಡು ಈ ಮಾಹಿತಿಯನ್ನು ಸಾಯಂಕಾಲ 6 ಗಂಟೆಯೊಳಗಾಗಿ ಜಿಲ್ಲಾ ಪಂಚಾಯತಿಯ ಸ್ವಚ್ಛ್ ಭಾರತ ಮಿಷನ್ ಸಮಾಲೋಚಕರಿಗೆ ಸಲ್ಲಿಸಬೇಕು. ಈ ಎಲ್ಲಾ ಸಮಾಲೋಚಕರು ಮಾಹಿತಿಯನ್ನು ಕ್ರೋಢೀಕರಿಸಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು.

ಕರವಸೂಲಾತಿ ಅಭಿಯಾನದಲ್ಲಿ ಕರವಸೂಲಿ ಮಾಡಲು ವಿಫಲರಾದಲ್ಲಿ ಅಂತಹ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮಾರ್ಚ್ 31ರಂದು ಖುದ್ದಾಗಿ ಸೂಕ್ತ ವಿವರಣೆಯೊಂದಿಗೆ ಜಿ.ಪಂ ಕಾರ್ಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಲ್ಲಾ ಪಂಚಾಯತ್ ಕಾರ್ಯಾಲಯದ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande