
ವಿಜಯಪುರ, 18 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ನಿಡಗುಂದಿ ಪೊಲೀಸ್ ಠಾಣೆ ವ್ಯಾಪ್ತಿಯ ಅಪರಾಧ ಸಂಖ್ಯೆ 94/2025ರಲ್ಲಿ ಆರೋಪಿತನನ್ನು ಪತ್ತೆಹಚ್ಚಿದ ಪೊಲೀಸರು, ಆತನಿಂದ 1.95 ಲಕ್ಷ ರೂ. ಮೌಲ್ಯದ 37 ಗ್ರಾಂ ತೂಕದ ಬಂಗಾರದ ತಾಳಿಸರವನ್ನು ವಶಪಡಿಸಿಕೊಂಡು, ನ್ಯಾಯಾಲಯದ ಆದೇಶದಂತೆ ವಾರಸುದಾರರಿಗೆ ಮರಳಿ ಹಸ್ತಾಂತರಿಸಿದರು.
ಈ ಪ್ರಕರಣವು ಬಿ.ಎನ್.ಎಸ್ -2023ರ ಕಲಂ 309(4) ಅಡಿಯಲ್ಲಿ ದಾಖಲಾಗಿತ್ತು. ತನಿಖೆ ವೇಳೆ ಆರೋಪಿತನನ್ನು ಪತ್ತೆ ಮಾಡಿದ ಪೊಲೀಸರು ಕಳುವಾಗಿದ್ದ ಬಂಗಾರದ ತಾಳಿಸರವನ್ನು ವಶಕ್ಕೆ ಪಡೆದರು. ನಂತರ ನ್ಯಾಯಾಲಯದ ಆದೇಶದಂತೆ ವಶಪಡಿಸಿಕೊಂಡ ಆಭರಣವನ್ನು ಅದರ ವಾರಸುದಾರರಿಗೆ ವಿತರಿಸಲಾಯಿತು.
ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಯವರ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ಲಾಘಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande