
ಬಾಗಲಕೋಟೆ, 18 ಮಾರ್ಚ್ (ಹಿ.ಸ.)
ಆ್ಯಂಕರ್ : ಹಣ ಡಬಲ್ ಮಾಡಿಕೊಡುತ್ತೇವೆ ಎಂದು ನಂಬಿಸಿ ಸಾರ್ವಜನಿಕರಿಂದ ಅಂದಾಜು ₹1 ಕೋಟಿ 20 ಲಕ್ಷ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಬಾಗಲಕೋಟೆ ಜಿಲ್ಲೆಯ
ಜಮಖಂಡಿ ನಗರ ಹಾಗೂ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಲಘಾಣ ಗ್ರಾಮದ ಇಬ್ಬರು ಆರೋಪಿಗಳು ಟ್ರೇಡಿಂಗ್ ಹೆಸರಲ್ಲಿ ಹೆಚ್ಚು ಲಾಭ ಕೊಡಿಸುವುದಾಗಿ ನಂಬಿಸಿ, 2024ರ ಏಪ್ರಿಲ್ 1ರಿಂದ 2025ರ ಮಾರ್ಚ್ 31ರವರೆಗೆ ಹಲವಾರು ಜನರಿಂದ ಖಾಸಗಿ ಫೈನಾನ್ಸ್ ಖಾತೆಗೆ ಹಣ ಹಾಕಿಸಿಕೊಂಡಿದ್ದಾರೆ ಎನ್ನಲಾಗಿದೆ.
ಆರೋಪಿಗಳು ಹಣ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲಿ ಹಣ ಡಬಲ್ ಆಗುತ್ತದೆ ಎಂದು ಭರವಸೆ ನೀಡಿ ಜನರಿಂದ ದೊಡ್ಡ ಮೊತ್ತದ ಹಣ ಸಂಗ್ರಹಿಸಿದ್ದಾರೆ.
ಬಳಿಕ ಹಣ ಹೂಡಿಕೆ ಮಾಡಿದವರಿಗೆ ಮೂಲ ಧನವಾಗಲಿ, ಲಾಭವಾಗಲಿ ವಾಪಸ್ ನೀಡದೇ ವಂಚನೆ ಎಸಗಿರುವುದು ದೂರಿನಲ್ಲಿ ತಿಳಿದುಬಂದಿದೆ.
ಈ ಸಂಬಂಧ ಬಾಗಲಕೋಟೆ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ 2026ರ ಮಾರ್ಚ್ 16ರಂದು ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande