
ನವದೆಹಲಿ, 18 ಮಾರ್ಚ್ (ಹಿ.ಸ.):
ಆ್ಯಂಕರ್:
ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ ಮಾಡಲಾಗಿದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು.
ಕೇಂದ್ರ ವಿಮಾನಯಾನ ಸಚಿವರಾದ ರಾಮ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಬುಧವಾರ ಮಾತನಾಡಿದರು.
“ಸಚಿವರೊಂದಿಗೆ ನಾಗರೀಕ ವಿಮಾನಯಾನ ಸಚಿವಾಲಯ ಹಾಗೂ ಹೆಚ್ಎಎಲ್ ನಿಂದ ಎತ್ತರದ ಮಿತಿ ಬಗ್ಗೆ ಚರ್ಚೆ ಮಾಡಿದೆವು. ಹೈದರಾಬಾದ್, ಮುಂಬೈ ಸೇರಿದಂತೆ ಬೇರೆ ಕಡೆಗಳಲ್ಲಿ ಮಿತಿ ಕಡಿಮೆ ಇದೆ. ಬೇರೆ ನಗರಗಳಲ್ಲಿ ಇರುವಂತೆ ಬೆಂಗಳೂರಿನಲ್ಲೂ ಎತ್ತರದ ಮಿತಿ ಇರಬೇಕು ಎಂದು ಮನವಿ ಮಾಡಿದ್ದೇವೆ. ಈ ಕಟ್ಟಡ ಎತ್ತರದ ಮಿತಿಯಿಂದಾಗಿ ಬೆಂಗಳೂರಿನಲ್ಲಿ ನಾಗರೀಕರು ಪ್ರೀಮಿಯಂ ಎಫ್ಎಆರ್ ತೆಗೆದುಕೊಳ್ಳಲು ಹಿಂಜರಿಯುತ್ತಿದ್ದಾರೆ. ಇದರಿಂದ ಸರ್ಕಾರಕ್ಕೂ ಹಣ ಬರುತ್ತಿಲ್ಲ. ಕೇಂದ್ರ ಸರ್ಕಾರವೇ ಎಫ್ಎಆರ್ ಕಡಿಮೆ ಮಾಡಿ ಪ್ರೀಮಿಯಂ ಎಫ್ಐಆರ್ ಹೆಚ್ಚಿಸಿ ಎಂದು ಹೇಳುತ್ತದೆ. ಹೀಗಾಗಿ ನಾವು ಅನೇಕ ತೀರ್ಮಾನ ಮಾಡಬೇಕಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚಿಸಿರುವೆ. ಅವರು ರಕ್ಷಣಾ ಮಂತ್ರಿ ಜತೆಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ನಮ್ಮ ಅಧಿಕಾರಿಗಳು ಹೆಚ್ಎಎಲ್ ಜತೆ ಚರ್ಚೆ ಮಾಡಿದ್ದಾರೆ. ನಾನು ಕೂಡ ರಕ್ಷಣಾ ಸಚಿವರ ಭೇಟಿಗೆ ಸಮಯ ತೆಗೆದುಕೊಂಡು ನಮ್ಮ ಈ ಸಮಸ್ಯೆಗಳನ್ನು ಅವರಿಗೆ ವಿವರಿಸುತ್ತೇನೆ. ಬೆಂಗಳೂರಿನ ಅಭಿವೃದ್ಧಿಗಾಗಿ ನಾವು ಒಂದು ಪರಿಹಾರ ಕಂಡುಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.
ಸಚಿವರಾದ ಬೋಸರಾಜು, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರು ಇಂದು ನಾಗರೀಕ ವಿಮಾನಯಾನ ಸಚಿವರನ್ನು ಭೇಟಿ ಮಾಡಿದೆವು. ಬೆಂಗಳೂರು ಬೆಳವಣಿಗೆ ಹಾಗೂ ಸಂಚಾರ ದಟ್ಟಣೆ ನಿವಾರಣೆ ಮಾಡಬೇಕಿದೆ. ಹೊರವಲಯದಲ್ಲಿ ಬಡಾವಣೆಗಳು ಹೆಚ್ಚುತ್ತಿವೆ. ಅಲ್ಲೆಲ್ಲಾ ವಾಹನಗಳ ಸಂಖ್ಯೆ ಹೆಚ್ಚಾಗಿವೆ. ಬೆಂಗಳೂರು ನಗರದಲ್ಲಿ ಹೆಚ್ಎಎಲ್, ಜಕ್ಕೂರು, ಯಲಹಂಕದ ವಾಯುನೆಲೆ ಹಾಗೂ ದೇವನಹಳ್ಳಿಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣವಿದೆ. ಈ ಸುತ್ತಮುತ್ತಲ ಪ್ರದೇಶದಲ್ಲಿ ಎತ್ತರದ ಕಟ್ಟಡ ನಿರ್ಮಾಣ ಸಾಧ್ಯವಾಗುವುದಿಲ್ಲ” ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa